Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಗಾಜಿಯಾಬಾದ್ : ತರಗತಿಯಲ್ಲಿ ವಿದ್ಯಾರ್ಥಿನಿಯರ ಜೊತೆ ಕೆಟ್ಟದಾಗಿ ವರ್ತಿಸಿದ್ದಕ್ಕೆ ಗದರಿಸಿದ ಶಿಕ್ಷಕನಿಗೆ ವಿದ್ಯಾರ್ಥಿ ಗುಂಡು ಹಾರಿಸಿದ ಘಟನೆ ಸರಸ್ವತಿ ವಿಹಾರ್ ಕಾಲೋನಿಯಲ್ಲಿರುವ ಖಾಸಗಿ ಶಾಲೆಯಲ್ಲಿ ನಡೆದಿದೆ.
12ನೇ ತರಗತಿಯ ವಿದ್ಯಾರ್ಥಿ ತನ್ನ ಮೂವರು ಸ್ನೇಹಿತರ ಜೊತೆ ಸೇರಿ ತರಗತಿಯ ವಿದ್ಯಾರ್ಥಿನಿಯರನ್ನು ಚುಡಾಯಿಸುತ್ತಿದ್ದ. ಇದನ್ನು ನೋಡಿದ ಶಿಕ್ಷಕ ವಿದ್ಯಾರ್ಥಿಗೆ ಗದರಿದ್ದಾರೆ.
ಇದರಿಂದ ಕೋಪಗೊಂಡ ವಿದ್ಯಾರ್ಥಿ ಸೇಡು ತೀರಿಸಿಕೊಳ್ಳಲು ಶಿಕ್ಷಕರು ಮನೆಗೆ ತೆರಳುತ್ತಿದ್ದಾಗ ಗುಂಡು ಹಾರಿಸಿದ್ದಾನೆ . ಈ ಘಟನೆಯಲ್ಲಿ ಶಿಕ್ಷನಿಗೆ ಗಾಯವಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಹಿನ್ನಲೆಯಲ್ಲಿ ಆರೋಪಿ ವಿದ್ಯಾರ್ಥಿಯ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲಿಸರು ತನಿಖೆ ನಡೆಸುತ್ತಿದ್ದಾರೆ.