ನವದೆಹಲಿ: ಮಹಿಳೆಯರ ನಗ್ನ ವಿಡಿಯೋ ಮಾಡಿ ಹಣಕ್ಕಾಗಿ ಬೇಡಿಕೆಯಿಡುತ್ತಿದ್ದ ವಿದ್ಯಾರ್ಥಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.
ಆರೋಪಿ ಪದವಿ ವಿದ್ಯಾರ್ಥಿಯಾಗಿದ್ದು, ಫೇಸ್ ಬುಕ್ ನಲ್ಲಿ ಖಾತೆ ಸೃಷ್ಟಿಸಿಕೊಂಡು ಮಹಿಳೆಯರ ಸ್ನೇಹ ಮಾಡಿಕೊಳ್ಳುತ್ತಿದ್ದ. ಬಳಿಕ ಅವರ ಸ್ನೇಹ ಸಂಪಾದಿಸಿ ವಿಡಿಯೋ ಚ್ಯಾಟ್ ಮಾಡುವಾಗ ನಗ್ನ ವಿಡಿಯೋ ರೆಕಾರ್ಡ್ ಮಾಡಿಕೊಳ್ಳುತ್ತಿದ್ದ.
ಇದೇ ಮಹಿಳೆಯೊಬ್ಬರ ವಿಡಿಯೋ ರೆಕಾರ್ಡ್ ಮಾಡಿಕೊಂಡು ಅಪರಿಚಿತ ನಂಬರ್ ಮೂಲಕ ವ್ಯಾಟ್ಸಪ್ ನಲ್ಲಿ ವಿಡಿಯೋ ಕಳುಹಿಸಿ 20 ಸಾವಿರ ರೂ.ಗೆ ಬೇಡಿಕೆಯಿಟ್ಟಿದ್ದ. ಈ ಸಂಬಂಧ ಮಹಿಳೆ ಪೊಲೀಸರಿಗೆ ದೂರು ನೀಡಿದ್ದರು. ಅದರಂತೆ ಪೊಲೀಸರು ಆರೋಪಿಯನ್ನು ಸೆರೆ ಹಿಡಿದಿದ್ದಾರೆ.