ಬಾಹ್ಯಾಕಾಶದಲ್ಲಿ ಇಸ್ರೋ ಮತ್ತೊಂದು ಐತಿಹಾಸಿಕ ಸಾಧನೆ ಮಾಡಿದೆ. ಸತೀಶ್ ಧವನ್ ಬಾಹ್ಯಾಕಾಶ ಉಡಾವಣೆ ಕೇಂದ್ರದಿಂದ ಜಿಸ್ಯಾಟ್-19 ಉಪಗ್ರಹವನ್ನು ಯಶಸ್ವಿಯಾಗಿ ಉಡಾವಣೆಗೊಳಿಸಲಾಗಿದೆ.
ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಉಡಾವಣಾ ಕೇಂದ್ರದಿಂದ ಇಂದು ಸಂಜೆ 640 ಟನ್ ತೂಕದ ಜಿಸ್ಯಾಟ್-19 ಉಪಗ್ರಹವನ್ನು ಯಶಸ್ವಿಯಾಗಿ ಗಗನಕ್ಕೆ ಹಾರಿಸಲಾಗಿದೆ.
ಕ್ರಯೋನಿಕ್ ತಂತ್ರಜ್ಞಾನ ಹೊಂದಿರುವ ಜಿಸ್ಯಾಟ್-19 ಉಪಗ್ರಹ ಉಡಾವಣೆಗೆ ಆದಿಚುಂಚನಗಿರಿ ಶ್ರೀಗಳು, ಹಿರಿಯ ವಿಜ್ಞಾನಿಗಳು ಸಾಕ್ಷಿಯಾದರು.
ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸತೊಂದು ವಿಕ್ರಮ ಸಾಧಿಸಿರುವುದಕ್ಕೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ವಿಜ್ಞಾನಿಗಳನ್ನು ಅಭಿನಂಧಿಸಿದ್ದಾರೆ. ಪ್ರಧಾನಿ ಮೋದಿ ಕೂಡಾ ಇದೊಂದು ಮಹತ್ತರ ಐತಿಹಾಸಿಕ ಸಾಧನೆ. ಸಾಧನೆಯ ಹಿಂದಿರುವ ಎಲ್ಲಾ ವಿಜ್ಞಾನಿಗಳಿಗೆ ಧನ್ಯವಾದಗಳನ್ನು ಅರ್ಪಿಸುವುದಾಗಿ ತಿಳಿಸಿದ್ದಾರೆ.
ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
http://kannada.fantasycricket.webdunia.com/
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.