ಮೀರತ್ : 13 ವರ್ಷದ ಹುಡುಗಿಯನ್ನು ನಾಲ್ವರು ಪುರುಷರು ಸೇರಿ ಕಬ್ಬಿನ ಹೊಲಕ್ಕೆ ಎಳೆದುಕೊಂಡು ಹೋಗಿ ಮಾನಭಂಗ ಎಸಗಿದ ಘಟನೆ ಉತ್ತರಪ್ರದೇಶದ ಹಪೂರ್ ಜಿಲ್ಲೆಯ ಗರ್ಹ್ ಪ್ರದೇಶದಲ್ಲಿ ನಡೆದಿದೆ.
ಈ ಬಗ್ಗೆ ಸಂತ್ರಸ್ತೆಯ ತಂದೆ ಪೊಲೀಸರಿಗೆ ದೂರು ನೀಡಿದ್ದ ಹಿನ್ನಲೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಅಲ್ಲದೇ ಈ ನಾಲ್ವರು ಆರೋಪಿಗಳು ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದವರಾಗಿದ್ದ ಕಾರಣ ಈ ಪ್ರದೇಶದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿದೆ ಎನ್ನಲಾಗಿದೆ.