Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಮಾತನಾಡಲು ಬರಲ್ಲ ಎನ್ನುತ್ತಲೇ ಸೊಗಸಾಗಿ ಮಾತನಾಡಿದ ಸುಧಾಮೂರ್ತಿ, ಕಿವಿಗೊಟ್ಟು ಆಲಿಸಿದ ಸಂಸದರು

SudhaMurthy

Sampriya

ನವದೆಹಲಿ , ಬುಧವಾರ, 3 ಜುಲೈ 2024 (15:02 IST)
Photo Courtesy X
ನವದೆಹಲಿ: ಲೇಖಕಿ ಸುಧಾ ಮೂರ್ತಿ ಅವರು ರಾಜ್ಯಸಭೆಯಲ್ಲಿ ತಮ್ಮ ಚೊಚ್ಚಲ ಭಾಷಣದಲ್ಲಿ, ಗರ್ಭಕಂಠದ ಕ್ಯಾನ್ಸರ್ ವಿರುದ್ಧ ಹೋರಾಡಲು ಸರ್ಕಾರ ಪ್ರಾಯೋಜಿತ ಲಸಿಕೆ ಕಾರ್ಯಕ್ರಮಕ್ಕೆ ಹಾಗೂ ದೇಶೀಯ ಪ್ರವಾಸೋದ್ಯಮವನ್ನು ಉತ್ತೇಜಿಸಲು ಕರೆ ನೀಡಿದರು.

ನವದೆಹಲಿ:  ರಾಜ್ಯಸಭೆಯಲ್ಲಿ ನಾಮನಿರ್ದೇಶನಗೊಂಡಿರುವ ಸುಧಾಮೂರ್ತಿ ಅವರು ಇದೇ ಮೊದಲ ಬಾರಿಗೆ ರಾಜ್ಯಸಭೆಯಲ್ಲಿ ಭಾಷಣ ಮಾಡಿದರು. ನಾನು ರಾಜಕಾರಣಿಯಲ್ಲ. ನನಗೆ ಹೆಚ್ಚು ಮತ್ತು ರಾಜಕೀಯ ಮಾತುಗಳನ್ನು ಆಡಲು ಬರುವುದಿಲ್ಲ ಎನ್ನುತ್ತಲೇ ಭಾಷಣ ಶುರು ಮಾಡಿದ ಸುಧಾ ಮೂರ್ತಿ ಅವರು ಈ ಮೇಲಿನ ವಿಷಯಕ್ಕೆ ಸಂಬಂಧಿಸಿದಂತೆ ಪ್ರಸ್ತಾಪಿಸಿದರು.

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಮುನ್ನಾದಿನದಂದು ಸುಧಾ ಮೂರ್ತಿ ಅವರನ್ನು ರಾಷ್ಟ್ರಪತಿಗಳು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದರು.

ಮಾರಣಾಂತಿಕ ಕಾಯಿಲೆಯಾಗಿರುವ ಗರ್ಭಕೋಶದ ಕ್ಯಾನ್ಸರ್‌ ​ ವಿರುದ್ಧ ಹೋರಾಡಲು ಸರ್ಕಾರಿ ಪ್ರಾಯೋಜಿತ ಲಸಿಕೆ ಕಾರ್ಯಕ್ರಮ ಪ್ರಾರಂಭ ಮಾಡಬೇಕು. ತಾಯಿ ಮೃತಪಟ್ಟರೆ ಮಕ್ಕಳು ಜೀವನ ಪೂರ್ತಿ ಅನಾಥರಾಗುತ್ತಾರೆ. ಹೀಗಾಗಿ, ಗರ್ಭಕೋಶ ಕ್ಯಾನ್ಸರ್​ಗೆ ಲಸಿಕೆ ನೀಡುವ ವ್ಯವಸ್ಥೆ ಮಾಡಬೇಕು. ಈಗ ಲಸಿಕೆಗೆ 1,300-1,400 ರೂ. ಆಗುತ್ತದೆ. ಸರ್ಕಾರ ಮಧ್ಯಪ್ರವೇಶಿಸಿದರೆ ಅದನ್ನು 800.ಗೆ ಹೆಣ್ಣುಮಕ್ಕಳಿಗೆ ಲಸಿಕೆ ಕೊಡಬಹುದು ಎಂದರು.

9-14 ವರ್ಷದೊಳಗಿನ ಹೆಣ್ಣುಮಕ್ಕಳಿಗೆ ಗರ್ಭಕೋಶ ಲಸಿಕೆ ಇದ್ದು, ಇದನ್ನು ತೆಗೆದುಕೊಂಡರೆ ಕ್ಯಾನ್ಸರ್​ ಅನ್ನು ತಡೆಗಟ್ಟಬಹುದು. ನಮ್ಮ ಹೆಣ್ಣುಮಕ್ಕಳ ಒಳಿತಿಗಾಗಿ ಈ ಲಸಿಕೆ ನೀಡಲು ನಾವು ಉತ್ತೇಜನ ನೀಡಬೇಕು ಎಂದು ಹೇಳಿದರು.

ಭಾರತದಲ್ಲಿ ಪ್ರವಾಸೋದ್ಯಮಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ದೇಶದಲ್ಲಿ 42 ಪ್ರವಾಸಿ ತಾಣಗಳು ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರಿವೆ. ಇನ್ನೂ 57 ತಾಣಗಳು ಪೆಂಡಿಂಗ್​ ಲಿಸ್ಟ್​ನಲ್ಲಿವೆ. ಇವುಗಳ ಕುರಿತು ಹೆಚ್ಚಿನ ಆದ್ಯತೆ ನೀಡಬೇಕು. ಕರ್ನಾಟಕದ ಶ್ರವಣಬೆಳಗೋಳದಲ್ಲಿನ ಬಾಹುಬಲಿಯ ಮೂರ್ತಿ, ಬದಾಮಿ, ಐಹೊಳೆ, ಮಧ್ಯಪ್ರದೇಶದ ಮಾಂಡು, ದೇಶದ ಗುಹೆಗಳು, ಲಿಂಗರಾಜ ದೇವಾಲಯಗಳು ದೇಶದ ಸಂಸ್ಕೃತಿಯ ತಾಣಗಳಾಗಿವೆ. ಇವುಗಳನ್ನು ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರಿಸಬೇಕೆಂದು ಒತ್ತಾಯ ಮಾಡಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಇನ್ನೂ 20 ವರ್ಷ ನಾವೇ ಅಧಿಕಾರದಲ್ಲಿರುವುದು, ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ