ನವದೆಹಲಿ: ಗಣರಾಜ್ಯೋತ್ಸವದ ಹಿನ್ನಲೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದವರಿಗೆ ಪದ್ಮಶ್ರೀ ಪ್ರಶಸ್ತಿಗಳನ್ನು ಘೋಷಿಸಲಾಗಿದ್ದು, ಕನ್ನಡತಿ ಸೂಲಗಿತ್ತಿ ನರಸಮ್ಮ ಅವರು ಈ ಗೌರವಕ್ಕೆ ಪಾತ್ರರಾಗಿದ್ದಾರೆ.
ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಕೃಷ್ಣಾಪುರದ ಸೂಲಗಿತ್ತಿ ನರಸಮ್ಮ ಆಸ್ಪತ್ರೆಯಲ್ಲಿ ವೈದ್ಯರಿಲ್ಲದ ಕಾಲದಲ್ಲಿ 1500ಕ್ಕೂ ಹೆಚ್ಚು ಹೆರಿಗೆಗಳನ್ನು ಮಾಡಿಸಿದ್ದರು. ಇದರಿಂದಾಗಿ ಅಲ್ಲಿನ ಜನರ ಪಾಲಿಗೆ ಅವರು ದೇವರಾಗಿದ್ದಾರೆ. ಇವರ ಈ ಸೇವೆಗಳಿಗೆ ಹಲವು ಸಂಘ ಸಂಸ್ಥೆಗಳು ಈಗಾಗಲೇ ಅನೇಕ ಪ್ರಶಸ್ತಿಗಳನ್ನು ನೀಡಿ ಗೌರವಿಸಿದ್ದಾರೆ. ಈಗ ಇವರಿಗೆ ಪದ್ಮಶ್ರೀ ಪ್ರಶಸ್ತಿ ಕೂಡ ಒಲಿದುಬಂದಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ