ಮುಂಬರುವ ಆಗಸ್ಟ್ 15 ಸ್ವಾತಂತ್ರೋತ್ಸವದ ದಿನದಂದು ಹೊಸ ಪಕ್ಷವನ್ನು ಘೋಷಿಸಲು ಸೂಪರ್ ಸ್ಟಾರ್ ರಜನಿಕಾಂತ್ ತೀರ್ಮಾನಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದಲ್ಲಿ ಸಿಎಂ ಅಭ್ಯರ್ಥಿಯಾಗಿ ಘೋಷಿಸಲು ಸಿದ್ದ ಎಂದು ಪಕ್ಷದ ರಾಷ್ಟ್ರಾಧ್ಯಕ್ಷ ಅಮಿತ್ ಶಾ ನೀಡಿದ ಆಹ್ವಾನವನ್ನು ತಿರಸ್ಕರಿಸಿದ ರಜನಿ, ಪ್ರಾದೇಶಿಕ ಪಕ್ಷಕ್ಕೆ ಮಣೆಹಾಕಲಿದ್ದಾರೆ ಎನ್ನಲಾಗಿದೆ.
ಪಕ್ಷದ ಹೆಸರು,. ಚಿಹ್ನೆ ಮತ್ತು ಇತರ ರೂಪರೇಷೆಗಳ ಬಗ್ಗೆ ರಜನಿಕಾಂತ್ ತಮ್ಮ ಆಪ್ತರೊಂದಿಗೆ ಚರ್ಚೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮುಂಬರುವ ವಿಧಾನಸಭೆ ಚುನಾವಣೆ ಫಲಿತಾಂಶದ ನಂತರ ಯಾವ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳಬೇಕು ಎನ್ನುವುದನ್ನು ನಿರ್ಧರಿಸಲಿದ್ದಾರೆ ಎನ್ನಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.