ನವದೆಹಲಿ: ವಿಧಾನಸಭೆ ಚುನಾವಣೆಯಲ್ಲಿ ಅತೀ ಹೆಚ್ಚು ಸಂಖ್ಯೆಯಲ್ಲಿ ಸ್ಥಾನ ಹೊಂದಿದ್ದರೂ, ತಮಗೆ ಸರ್ಕಾರ ರಚನೆಗೆ ಅವಕಾಶ ನೀಡಲಿಲ್ಲ ಎಂದು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದ ಕಾಂಗ್ರೆಸ್ ಗೆ ಮುಖಭಂಗವಾಗಿದೆ.
ಬಿಜೆಪಿಯ ಮನೋಹರ್ ಪರಿಕ್ಕರ್ ನೇತೃತ್ವದ ಸರ್ಕಾರ ಪ್ರಮಾಣ ವಚನ ಸ್ವೀಕಾರಕ್ಕೆ ತಡೆ ನೀಡಬೇಕೆಂದು ಕಾಂಗ್ರೆಸ್ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ತಳ್ಳಿ ಹಾಕಿದೆ. ಇದರೊಂದಿಗೆ ಬಿಜೆಪಿ ಹಾದಿ ಸುಗಮವಾಗಿದೆ.
13 ಸ್ಥಾನಗಳನ್ನು ಹೊಂದಿರುವ ಬಿಜೆಪಿ ಪಕ್ಷೇತರರ ಸಹಾಯದೊಂದಿಗೆ ಸರ್ಕಾರ ರಚಿಸಲು ಮುಂದಾಗಿದೆ. ಇದನ್ನು 17 ಸ್ಥಾನಗಳನ್ನು ಹೊಂದಿದ ಕಾಂಗ್ರೆಸ್ ಪ್ರಶ್ನೆ ಮಾಡಿತ್ತು. ರಾಜ್ಯಪಾಲರು ಮತ್ತು ಸುಪ್ರೀಂ ಕೋರ್ಟ್ ಗೆ ದೂರು ಸಲ್ಲಿಸಿತ್ತು. ಇದರಿಂದಾಗಿ ಮನೋಹರ್ ಪರಿಕ್ಕರ್ ಇಂದು ಪ್ರಮಾಣವಚನ ಸ್ವೀಕರಿಸುವುದು ಅನುಮಾನವಾಗಿತ್ತು. ಆದರೆ ಆ ಆತಂಕಗಳೆಲ್ಲಾ ಈಗ ದೂರವಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ