ನವದೆಹಲಿ: ಪಟಾಕಿ ಹಬ್ಬ ದೀಪಾವಳಿಗೆ ಇನ್ನು ಕೇವಲ ಒಂದು ವಾರ ಬಾಕಿಯಿದೆ. ಆದರೆ ಅಷ್ಟರಲ್ಲೇ ದೆಹಲಿ ಜನತೆಗೆ ಸುಪ್ರೀಂ ಕೋರ್ಟ್ ಶಾಕ್ ನೀಡಿದೆ.
ಪಟಾಕಿ ಸಿಡಿಸಿ ಹಬ್ಬ ಆಚರಿಸಬೇಕೆಂದಿದ್ದ ಜನರಿಗೆ ನ್ಯಾಯಾಲಯ ಆಘಾತಕಾರಿ ಆದೇಶ ನೀಡಿದೆ. ರಾಷ್ಟ್ರ ರಾಜಧಾನಿಯಲ್ಲಿ ಪಟಾಕಿ ಮಾರಾಟ ಮಾಡಬಾರದು ಮತ್ತು ಸಿಡಿಸಬಾರದು ಎಂದು ಸುಪ್ರೀಂ ಕೋರ್ಟ್ ಆದೇಶ ನೀಡಿದೆ.
ಕಳೆದ ವರ್ಷವೇ ಕೋರ್ಟ್ ರಾಷ್ಟ್ರ ರಾಜಧಾನಿಯಲ್ಲಿ ಪಟಾಕಿಗಳ ಮಾರಾಟ ಮತ್ತು ಬಳಕೆಗೆ ನಿರ್ಬಂಧ ಹೇರಿತ್ತು. ಆ ಆದೇಶವನ್ನು ಸುಪ್ರೀಂ ಕೋರ್ಟ್ ಮತ್ತೆ ಎತ್ತಿಹಿಡಿದಿದೆ. ವಾಯುಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ನ ಈ ಆದೇಶ ಮಹತ್ವದ್ದಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ