Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಜಯಲಲಿತಾ ದೇಹಸ್ಥಿತಿ ಬಹಿರಂಗಕ್ಕೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ಜಯಲಲಿತಾ ದೇಹಸ್ಥಿತಿ ಬಹಿರಂಗಕ್ಕೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾ
ಚೆನ್ನೈ , ಗುರುವಾರ, 6 ಅಕ್ಟೋಬರ್ 2016 (11:29 IST)
ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಆರೋಗ್ಯದ ವಿವರವನ್ನು ಬಹಿರಂಗ ಪಡಿಸುವಂತೆ ಸಾಮಾಜಿಕ ಕಾರ್ಯಕರ್ತ ಟ್ರಾಫಿಕ್ ರಾಮಸ್ವಾಮಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ವಜಾಗೊಳಿಸಿದೆ. 

ವಾದ, ಪ್ರತಿವಾದದ ಬಳಿಕ ರಾಮಸ್ವಾಮಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಕೋರ್ಟ್ ಇದರಲ್ಲಿ ಸಾರ್ವಜನಿಕ ಹಿತಾಸಕ್ತಿ ಏನೂ ಇಲ್ಲ. ರಾಮಸ್ವಾಮಿ ಪ್ರಚಾರಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆಂದು ಚಾಟಿ ಬೀಸಿತು.
 
ಜಯಾ ದೇಹ ಸ್ಥಿತಿ ಬಗ್ಗೆ ಊಹಾಪೋಹಗಳು ಎದ್ದಿರುವ ಹಿನ್ನೆಲೆಯಲ್ಲಿ ಈ ಕುರಿತು ಸ್ಪಷ್ಟನೆ ನೀಡುವಂತೆ ಟ್ರಾಫಿಕ್ ರಾಮಸ್ವಾಮಿ ಕೋರ್ಟ್ ಮೆಟ್ಟಿಲೇರಿದ್ದರು. ಜಯಾ ಆರೋಗ್ಯ ಹೇಗಿದೆ? ಯಾವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ? ಅವರು ತಮ್ಮ ಸಚಿವ ಸಂಪುಟದ ಸದಸ್ಯರನ್ನು ಭೇಟಿಯಾಗಿದ್ದಾರೆಯೇ? ಅವರು ಆಸ್ಪತ್ರೆಯಲ್ಲಿರುವ ಫೋಟೋವನ್ನು ಬಿಡುಗಡೆ ಮಾಡಿ ಎಂದು ರಾಮಸ್ವಾಮಿ ಅರ್ಜಿಯಲ್ಲಿ ಕೇಳಿಕೊಂಡಿದ್ದರು.
 
ಮಂಗಳವಾರ  ರಾಮಸ್ವಾಮಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ್ದ ಕೋರ್ಟ್ ಆಸ್ಪತ್ರೆಯಿಂದ ಮಾಹಿತಿ ಕಲೆ ಹಾಕಿ ಏನಾಗಿದೆ ಎಂಬುದನ್ನು  ಕೋರ್ಟ್ ಮೂಲಕ ಬುಧವಾರದೊಳಗೆ ಬಹಿರಂಗ ಪಡಿಸಿ ಎಂದು ತಮಿಳುನಾಡು ಸರ್ಕಾರಕ್ಕೆ ತಾಕೀತು  ಮಾಡಿತ್ತು . ಆದರೆ ವಾದ ಪ್ರತಿವಾದ ಕೇಳಿದ ಬಳಿಕ ಅರ್ಜಿಯನ್ನು ವಜಾಗೊಳಿಸಿದೆ.
 
ಜಯಲಲಿತಾ ಕಳೆದ ಸೆಪ್ಟೆಂಬರ್ 22 ರಂದು ನಿರ್ಜಲೀಕರಣ ಮತ್ತು ಜ್ವರದ ಬಾಧೆಗೊಳಗಾಗಿ ಚೆನ್ನೈನಲ್ಲಿರುವ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದರು. ಅವರ ಆರೋಗ್ಯದಲ್ಲಿ ಸುಧಾರಣೆಯಾಗಿದ್ದು, ಕೆಲವು ದಿನಗಳ ಮಟ್ಟಿಗೆ ಅವರನ್ನು ನಿಗಾವಣೆಯಲ್ಲಿ ಇಡಲಾಗುವುದು ಎಂದು ಆಸ್ಪತ್ರೆ ಸೆಪ್ಟೆಂಬರ್ 23 ರಿಂದ ಪತ್ರಿಕಾ ಹೇಳಿಕೆಯನ್ನು ನೀಡುತ್ತಲೇ ಬಂದಿದೆ. ಆದರೆ ಅವರ ಆರೋಗ್ಯದ ಕುರಿತಾದ ಯಾವುದೇ ನಂಬಲರ್ಹ ವರದಿಯನ್ನು ಇನ್ನೂ ಬಿಡುಗಡೆ ಮಾಡಲಾಗಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

Share this Story:

Follow Webdunia kannada

ಮುಂದಿನ ಸುದ್ದಿ

ಹೆಬ್ಬಾವಿನ ಜತೆಯಲ್ಲಿ ಸೆಣಸಾಡಿ ಗೆದ್ದ ಬಾಲಕ