ನವದೆಹಲಿ:ತಾವು ಮುಂದಿನ ರಾಷ್ಟ್ರಪತಿ ಚುನಾವಣೆಯ ಎನ್ಡಿಎ ಅಭ್ಯರ್ಥಿ ಅಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಸುಷ್ಮಾ ಸ್ವರಾಜ್ ರಾಷ್ಟ್ರಪತಿ ಅಭ್ಯರ್ಥಿ ಎಂಬ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸುಷ್ಮಾ ಸ್ವರಾಜ್ ಈ ನಾನು ಎನ್ ಡಿಎ ರಾಷ್ಟ್ರಪತಿ ಅಭ್ಯರ್ಥಿ ಅಲ್ಲ. ಈ ಬಗ್ಗೆ ಎದ್ದಿರುವ ಸುದ್ದಿ ಕೇವಲ ವದಂತಿ ಅಷ್ಟೇ. ನಾನು ವಿದೇಶಾಂಗ ಸಚಿವೆಯಾಗಿಯೇ ಮುಂದುವರೆಯುತ್ತೇನೆ ಎಂದಿದ್ದಾರೆ.
ಈಗಿನ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅಧಿಕಾರಾವಧಿ ಜುಲೈ 24 ರಂದು ಮುಗಿಯಲಿದ್ದು ಆ ಸ್ಥಾನ ಅಲಂಕರಿಸಲು ಸುಷ್ಮಾ ಸ್ವರಾಜ್ ಎಲ್ಲಾ ರೀತಿಯಲ್ಲಿ ಅರ್ಹರಾಗಿದ್ದಾರೆ ಎಂದು ಬಿಜೆಪಿ ಮುಖಂಡರು ಮತ್ತು ಸಂಘ ಪರಿವಾರದ ಮುಖ್ಯಸ್ಥರು ಅಭಿಪ್ರಾಯಪಟ್ಟಿದ್ದಾರೆ ಎಂದು ಇತ್ತೀಚಿಗೆ ವರದಿಗಳು ಪ್ರಸಾರವಾಗಿದ್ದವು.