ನವದೆಹಲಿ : ಇಂದಿನಿಂದ 17 ನೇ ಲೋಕಸಭೆಯ ಮೊದಲ ಅಧಿವೇಶನ ಆರಂಭವಾಗಲಿದ್ದು, ಇಂದು ನೂತನ ಸಂಸದರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಜುಲೈ 26ರವರೆಗೆ ಒಟ್ಟು 40 ದಿನಗಳ ಕಾಲ ನಡೆಯುವ ಅಧಿವೇಶನಲ್ಲಿ ಮೊದಲ ದಿನವಾದ ಇಂದು ಹಾಗೂ ನಾಳೆ ಹಂಗಾಮಿ ಸ್ಪೀಕರ್ ಆಗಿ ನೇಮಕಗೊಂಡಿರುವ ವಿರೇಂದ್ರ ಕುಮಾರ್ ಎಲ್ಲಾ ನೂತನ ಸಂಸದರಿಗೆ ಪ್ರಮಾಣವಚನ ಭೋದಿಸಲಿದ್ದಾರೆ. ಇದೇ ತಿಂಗಳ 19ರಂದು ಸ್ಪೀಕರ್ ಹುದ್ದೆ ಆಯ್ಕೆ ಪ್ರಕ್ರಿಯೆ ನಡೆಯಲಿದ್ದು, 20ರಂದು ಸಂಸತ್ ನಲ್ಲಿ ಜಂಟಿ ಅಧಿವೇಶನ ಉದ್ದೇಶಿಸಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭಾಷಣ ಮಾಡಲಿದ್ದಾರೆ. ಜುಲೈ 4ರಿಂದ ಪ್ರಶ್ನೋತ್ತರ ಕಲಾಪ ಆರಂಭವಾಗಲಿದೆ.
ಈಗಾಗಲೇ ಪ್ರಧಾನಿ ಮೋದಿ ಸಂಸತ್ ಅಧಿವೇಶನ ಸುಗಮವಾಗಿ ನಡೆಸಲು ಪ್ರತಿಪಕ್ಷಗಳು ಸಹಕರಿಸುವಂತೆ ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಈ ಬಾರಿಯ ಅಧಿವೇಶನದಲ್ಲಿ ಬಜೆಟ್ ಮಂಡನೆಯ ಜೊತೆಗೆ ತ್ರಿವಳಿ ತಲಾಖ್ ಸೇರಿದಂತೆ ಹಲವು ಪ್ರಮುಖ ಮಸೂದೆಗಳು ಮಂಡನೆ ಆಗಲಿದೆ ಎನ್ನಲಾಗಿದೆ.