ಹೈದರಾಬಾದ್ : ಮೈಸೂರಿನ ಸುಲ್ತಾನ್ ಬಗ್ಗೆ ಮಾತನಾಡುವುದನ್ನು ಬಿಟ್ಟು, ತಮ್ಮ ದೇಶದಲ್ಲಿ ನೆಲೆ ಕಂಡುಕೊಂಡಿರುವ ಉಗ್ರ ಸಂಘಟನೆಗಳನ್ನು ನಿಯಂತ್ರಿಸಬೇಕು ಎಂದು ಟಿಪ್ಪು ಬಗ್ಗೆ ಮಾತನಾಡಿದ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಅವರಿಗೆ ಎಐಎಂಐಎಂ ಪಕ್ಷದ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ತಿರುಗೇಟು ನೀಡಿದ್ದಾರೆ.
ಹೈದರಾಬಾದ್‍ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿರುವ ಓವೈಸಿ, ‘ಇಮ್ರಾನ್ ಖಾನ್ ಅವರು ಪಾಕಿಸ್ತಾನದ ಸಂಸತ್ ನಲ್ಲಿ ಮುಸ್ಲಿಂ ದೊರೆಗಳಾದ ಟಿಪ್ಪು ಸುಲ್ತಾನ್ ಹಾಗೂ ಬಹದ್ದೂರ್ ಷಾ ಜಾಫರ್ ಬಗ್ಗೆ ಮಾತನಾಡಿದ್ದಾರೆ. ಟಿಪ್ಪು ಸುಲ್ತಾನ್ ಬಗ್ಗೆ ಹಾಡಿ ಹೊಗಳಿದ್ದಾರೆ. ಆದರೆ ಟಿಪ್ಪು ಹಿಂದೂ ವಿರೋಧಿಯಲ್ಲ, ತನ್ನ ಎದುರಾಳಿಗಳಿಗೆ ದುಸ್ವಪ್ನವಾಗಿದ್ದ ಎಂಬುದನ್ನು ಖಾನ್ ತಿಳಿದುಕೊಳ್ಳಬೇಕು’ ಎಂದು ಹೇಳಿದ್ದಾರೆ.
‘ಪಾಕ್ ಪ್ರಧಾನಿ ಆಟಮ್ ಬಾಂಬ್‍ಗಳ ಬಗ್ಗೆ ಮಾತನಾಡುತ್ತಾರೆ. ಭಾರತೀಯರ ಬಳಿ ಬಾಂಬ್‍ಗಳು ಇಲ್ಲವೆಂದು ಇಮ್ರಾನ್ ಖಾನ್ ತಿಳಿದಿದ್ದಾರೆ’ ಎಂದು ಅವರು ಕಿಡಿಕಾರಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.