ತಮಿಳುನಾಡು ರಾಜಕೀಯ ಬಿಕ್ಕಟ್ಟು ಕುರಿತಂತೆ ರಾಜ್ಯಪಾಲ ವಿದ್ಯಾಸಾಗರ್ ರಾವ್ ಇಂದು ರಾಷ್ಟ್ರಪತಿಯವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸಭಾಪತಿ ಧನಪಾಲ್, ಟಿಟಿವಿ ದಿನಕರನ್ ಬೆಂಬಲಿಗರಾಗಿರುವ 18 ಶಾಸಕರನ್ನು ಅನರ್ಹಗೊಳಿಸಿ ಆದೇಶ ನೀಡಿದ್ದರಿಂದ ತೀವ್ರ ರಾಜಕೀಯ ಸಂಕಷ್ಟ ಎದುರಾಗಿದೆ. ಸಭಾಪತಿಯ ಆದೇಶವನ್ನು ಕೋರ್ಟ್‌ನಲ್ಲಿ ಪ್ರಶ್ನಿಸುವುದಾಗಿ ಟಿಟಿವಿ ಬೆಂಬಲಿಗ ಶಾಸಕರು ತಿಳಿಸಿದ್ದಾರೆ.
ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ಸರಕಾರವನ್ನು ಅಧಿಕಾರದಿಂದ ಕೆಳಗಿಳಿಸುವುದಾಗಿ ದಿನಕರನ್ ಎಚ್ಚರಿಸಿದ್ದಾರೆ.
ಸಿಎಂ ಪಳನಿಸ್ವಾಮಿ ಸರಕಾರ ಬಹುಮತ ಕಳೆದುಕೊಂಡಿದ್ದು, ರಾಜ್ಯಪಾಲರು ಕೂಡಲೇ ಬಹುಮತ ಸಾಬೀತುಪಡಿಸಲು ಆದೇಶ ನೀಡಬೇಕು ಎಂದು ವಿಪಕ್ಷವಾದ ಡಿಎಂಕೆ ಮುಖಂಡ ಎಂ.ಕೆ.ಸ್ಟಾಲಿನ್ ಒತ್ತಾಯಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.