ತಮಿಳುನಾಡಿನ ಮಾಜಿ ಮುಖ್ಯಮಂತ್ರಿ, ದಿವಂಗತ ಜೆ. ಜಯಲಲಿತಾ ಅವರ ಆಪ್ತ ಸಹಾಯಕಿ ಶಶಿಕಲಾ ನಟರಾಜನ್ ಅವರು ಎಐಡಿಎಂಕೆ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.
ಚೆನ್ನೈನಲ್ಲಿ ನಡೆದ ಎಐಡಿಎಂಕೆ ಕಾರ್ಯಕಾರಣಿ ಸಭೆಯಲ್ಲಿ ಒಮ್ಮತದಿಂದ ಈ ನಿರ್ಣಯವನ್ನು ಅಂಗೀಕರಿಸಲಾಯ್ತು. ಜನವರಿ 15ರ ನಂತರ ಶಶಿಕಲಾ ಅಧಿಕಾರವನ್ನು ವಹಿಸಿಕೊಳ್ಳಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಶಶಿಕಲಾ ಅವರ ಅನುಪಸ್ಥಿತಿಯಲ್ಲಿ ನಡೆದ ಪದಾಧಿಕಾರಿಗಳ ಸಭೆಯಲ್ಲಿ ಒಟ್ಟು 14 ನಿರ್ಣಯವನ್ನು ತೆಗೆದುಕೊಳ್ಳಲಾಯ್ತು. ಜಯಲಲಿತಾ ಅವರಿಗೆ ನೊಬೆಲ್ ಶಾಂತಿ ಪ್ರಶಸ್ತಿ ನೀಡಬೇಕು, ಮ್ಯಾಗ್ಸೆಸೆ ಪ್ರಶಸ್ತಿ ನೀಡಬೇಕು ಮತ್ತು ಅವರ ಜನ್ಮದಿನವನ್ನು ರಾಷ್ಟ್ರೀಯ ರೈತರ ದಿನವನ್ನಾಗಿ ಆಚರಿಸಬೇಕು ಎಂಬುದು ಈ ನಿರ್ಣಯಗಳಲ್ಲಿ ಸೇರಿವೆ.
ಸಭೆಯನ್ನುದ್ದೇಶಿಸಿ ಮಾತನಾಡಿದ ತಮಿಳುನಾಡಿನ ಮುಖ್ಯಮಂತ್ರಿ ಪನ್ನೀರ್ ಸೆಲ್ವಂ ಜಯಲಲಿತಾ ಅವರನ್ನು ನೆನೆದು ಕಣ್ಣೀರಿಟ್ಟರು. ಅಳು ತಡೆಯಲಾರದೇ ಅವರು ಎರಡು ಬಾರಿ ಭಾಷಣವನ್ನು ನಿಲ್ಲಿಸಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ