ಕರ್ನಾಟಕ ರಾಜ್ಯ ತಮಿಳುನಾಡಿಗೆ ಇನ್ನೂ 81 ಟಿಎಂಸಿ ನೀರು ಬಿಡಬೇಕಾಗಿದ್ದು, ನಮ್ಮ ಪಾಲಿನ ನೀರು ಬಿಡುಗಡೆ ಮಾಡಲು ಕರ್ನಾಟಕ ರಾಜ್ಯ ಸರ್ಕಾರಕ್ಕೆ ಮನವಿ ಕೂಡ ಮಾಡಲಾಗಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಪಳನಿಸ್ವಾಮಿ ಹೇಳಿದ್ದಾರೆ.
ಕಾವೇರಿ ನ್ಯಾಯಮಂಡಳಿ 2007ರಲ್ಲಿ ನೀಡಿದ ತೀರ್ಪಿನ ಅನ್ವಯ ಕರ್ನಾಟಕ ತಮಿಳುನಾಡಿಗೆ ವರ್ಷಕ್ಕೆ 192 ಟಿಎಂಸಿ ನೀರು ಬಿಡಬೇಕು. ಆದರೆ, ಕರ್ನಾಟಕ 111 ಟಿಎಂಸಿ ನೀರು ಮಾತ್ರ ಬಿಟ್ಟಿದೆ ಎಂದಿದ್ದಾರೆ.
ನ್ಯಾಯಮಂಡಳಿ ಆದೇಶದಂತೆ ಕರ್ನಾಟಕ ನೀರು ಬಿಡಲು ಮೇ 2018ರವರೆಗೆ ಸಮಯವಿದೆ ಎಂದು ಸದನದಲ್ಲಿ ಹೇಳಿದ್ದಾರೆ.
ಡಿಎಂಕೆ ಶಾಸಕ ದೊರೈ ಚಂದ್ರಶೇಖರ್ ಕಾವೇರಿ ನೀರಿನ ವಿಷಯದ ಬಗ್ಗೆ ಸದನದಲ್ಲಿ ಸರ್ಕಾರವನ್ನು ಪ್ರಶ್ನಿಸಿದ್ದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.