Publish Date: Sun, 03 Apr 2022 (09:52 IST)
Updated Date: Sun, 03 Apr 2022 (09:54 IST)
ಲಕ್ನೋ : ಅಯೋಧ್ಯೆ ದೇವಾಲಯಗಳು ಮತ್ತು ಧಾರ್ಮಿಕ ಸಂಘಟನೆಗಳಿಗೆ ತೆರಿಗೆ ವಿನಾಯಿತಿಯನ್ನು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಘೋಷಿಸಿದ್ದಾರೆ.
ಅಯೋಧ್ಯೆಯ ದೇವಾಲಯಗಳು ಮತ್ತು ಇತರ ದೇವಾಲಯಗಳ ಮೇಲೆ ವಾಣಿಜ್ಯ ತೆರಿಗೆಯನ್ನು ವಿಧಿಸದಂತೆ ನಗರದ ಮುನ್ಸಿಪಲ್ ಕಾರ್ಪೊರೇಶನ್ಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅದೇಶಿಸಿದ್ದಾರೆ.
ನಗರದ ದೇವಸ್ಥಾನಗಳು, ಧರ್ಮಶಾಲೆಗಳು ಮತ್ತು ಧಾರ್ಮಿಕ ಸಂಘಟನೆಗಳಿಗೆ ಈ ವಿನಾಯಿತಿ ಅನ್ವಯಿಸಲಿದೆ. ಕೋವಿಡ್ ಸಾಂಕ್ರಾಮಿಕ ರೋಗದಿಂದಾಗಿ ಎರಡು ವರ್ಷಗಳ ನಂತರ ನಡೆಯುವ ಜಾತ್ರೆಯಲ್ಲಿ ಸುಮಾರು 10 ಲಕ್ಷ ಭಕ್ತರು ಭಾಗವಹಿಸುವ ನಿರೀಕ್ಷೆಯಿದೆ.