ನವದೆಹಲಿ: ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡಬೇಕೆಂದು ಒತ್ತಾಯಿಸುತ್ತಿರುವ ತೆಲುಗು ದೇಶಂ ಪಕ್ಷದ ಸಂಸದರು ಸಂಸತ್ತಿನ ಎದುರು ವಿಶಿಷ್ಟ ಪ್ರತಿಭಟನೆ ನಡೆಸಿದ್ದಾರೆ.
ಸಂಸತ್ತಿನ ಗಾಂಧಿ ಪ್ರತಿಮೆ ಎದುರು ಟಿಡಿಪಿ ಸಂಸದರು ಭಜನೆ ಮಾಡುವ ಮೂಲಕ ವಿಶಿಷ್ಟವಾಗಿ ಪ್ರತಿಭಟನೆ ಮಾಡುತ್ತಿದ್ದಾರೆ. ಅದರ ಜತೆಗೆ ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನ ಮಾನ ನೀಡಿ ಎಂದು ಭಿತ್ತಿಪತ್ರ ಹಿಡಿದು ಕೇಂದ್ರದ ಮೇಲೆ ಒತ್ತಡ ತರುವ ಯತ್ನ ನಡೆಸಿದ್ದಾರೆ.
ಮೊನ್ನೆಯಷ್ಟೇ ಟಿಡಿಪಿ ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನ ಮಾನ ನೀಡದ ಕೇಂದ್ರದ ವಿರುದ್ಧ ಸಂಸತ್ತಿನಲ್ಲಿ ಅವಿಶ್ವಾಸ ಗೊತ್ತುವಳಿ ಮಂಡಿಸಿತ್ತು. ಆದರೆ ಕೇಂದ್ರದ ವಿರುದ್ಧ ಅವಿಶ್ವಾಸ ಮತ ಸಾಬೀತುಪಡಿಸಲು ವಿಫಲವಾಗಿತ್ತು.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.