Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

3ನೇ ತರಗತಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಶಿಕ್ಷಕ ಅಂದರ್!

3ನೇ ತರಗತಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಶಿಕ್ಷಕ ಅಂದರ್!
bengaluru , ಬುಧವಾರ, 18 ಮೇ 2022 (15:24 IST)
ಸುಮಾರು 9 ವರ್ಷದ ವಿದ್ಯಾರ್ಥಿನಿಗೆ ಶಿಕ್ಷಕನೊಬ್ಬ ಲೈಂಗಿಕ ಕಿರುಕುಳ ನೀಡಿರುವ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಸಂತೇಬಾಚಹಳ್ಳಿ ಹೋಬಳಿಯ ಗಂಗನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಭಾರತೀಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಂಗನಹಳ್ಳಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಎಸ್.ಕೆ.ಚಂದ್ರಶೇಖರ್ ಲೈಂಗಿಕ ಕಿರುಕುಳ ನೀಡಿದ್ದು, ಪೊಲೀಸರು ಬಂಧಿಸಿದ್ದಾರೆ.
ಶಾಲೆಯ 3ನೇ  ತರಗತಿಯ ವಿದ್ಯಾರ್ಥಿನಿಯೊಬ್ಬಳನ್ನು ಮಾರ್ಚ್ 31ರಂದು ಶೌಚಾಲಯ ಕೊಠಡಿಗೆ ಕರೆದುಕೊಂಡು ಹೋಗಿ  ಲೈಂಗಿಕ ಕಿರುಕುಳ ನೀಡಿದ್ದನು ಎಂದು ಆರೋಪಿಸಲಾಗಿದೆ.  ಶಾಲೆ ಪುನರಾರಂಭಗೊಂಡ ಹಿನ್ನೆಲೆಯಲ್ಲಿ ಲೈಂಗಿಕ ಕಿರುಕುಳಕ್ಕೆ ಒಳಗಾದ  ವಿದ್ಯಾರ್ಥಿನಿ ಶಾಲೆಗೆ ಹೋಗಲು ನಿರಾಕರಿಸಿದ್ದಾಳೆ.
ಆಗ ಪೋಷಕರು ಶಾಲೆಗೆ ಹೋಗದಿರಲು ಕಾರಣವೇನೆಂದು ಹುಡುಗಿಯ ಸ್ನೇಹಿತೆಯರನ್ನು ವಿಚಾರಿಸಿದಾಗ ಚಂದ್ರು‌ ಮಾಸ್ಟರ್  ಬಟ್ಟೆ ಬಿಚ್ಚಿ ಮೈಕೈ ಮುಟ್ಟುತ್ತಾರೆ. ಇದನ್ನು ಯಾರಿಗೂ ಹೇಳಬಾರದು ಎಂದು ಹೆದರಿಸಿದ್ದಾರೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜು ಸಮ್ಮುಖದಲ್ಲಿ ಪೋಷಕರಿಗೆ ತಿಳಿಸಿದ್ದಾರೆ.
ಇದರಿಂದ ರೊಚ್ಚಿಗೆದ್ದ ಪೋಷಕರು ಆರೋಪಿಯನ್ನು ಕೂಡಲೇ ಅಮಾನತ್ತು ಮಾಡಬೇಕು. ಇಲ್ಲದಿದ್ದರೆ ನಾವೇ ಶಿಕ್ಷಕನ ಬಟ್ಟೆ ಬಿಚ್ಚಿ ಕಂಬಕ್ಕೆ ಕಟ್ಟಿ ಥಳಿಸಬೇಕಾಗುತ್ತದೆ ಎಂದು ಒತ್ತಾಯ ಮಾಡಿದ್ದಾರೆ.
ವಿದ್ಯಾರ್ಥಿನಿಯರ ಹೇಳಿಕೆ ಕೇಳುತ್ತಿದ್ದಂತೆಯೇ ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜು ಅವರು ಆರೋಪಿ ಶಿಕ್ಷಕ ಎಸ್.ಕೆ.ಚಂದ್ರಶೇಖರ್ ಎಂಬಾತನನ್ನು ಸ್ಥಳದಲ್ಲೇ ಅಮಾನತ್ತು ಮಾಡಿ ಆದೇಶ ನೀಡಿದ್ದಾರೆ.
ಕಳೆದ 10 ವರ್ಷದಿಂದ ಗಂಗನಹಳ್ಳಿ ಗ್ರಾಮದ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸಹ ಶಿಕ್ಷಕನಾಗಿ  ಕರ್ತವ್ಯ ನಿರ್ವಹಿಸುತ್ತಿದ್ದ ಆರೋಪಿ ಎಸ್.ಕೆ. ಚಂದ್ರಶೇಖರ್ ವಿರುದ್ದ ಹಾಗಾಗ್ಗೆ ಇದೇ ರೀತಿಯ ಲೈಂಗಿಕ ಕಿರುಕುಳದ ಆರೋಪ ಕೇಳಿ ಬಂದಿತ್ತು. ಆದರೂ ಗ್ರಾಮಸ್ಥರು ನಂಬಿರಲಿಲ್ಲ. ಈಗ ಮಕ್ಕಳ ಬಾಯಿಂದಲೇ ಸತ್ಯ ಹೊರ ಬಂದ ಹಿನ್ನೆಲೆಯಲ್ಲಿ ಆರೋಪಿ ಚಂದ್ರಶೇಖರ್ ನನ್ನು  ಸಾಕ್ಷಿ ಸಮೇತ ಪೊಲೀಸರಿಗೆ ಒಪ್ಪಿಸಿ ಸೂಕ್ತ  ಕಠಿಣ ಕಾನೂನು ಕ್ರಮ ಜರುಗಿಸುವಂತೆ
ವಿಷಯ ತಿಳಿದ ತಕ್ಷಣ ಗಂಗನಹಳ್ಳಿ ಗ್ರಾಮಕ್ಕೆ ಬೇಟಿ ನೀಡಿದ  ಕಿಕ್ಕೇರಿ  ಪೋಲೀಸ್ ಇನ್ಸ್ ಪೆಕ್ಟರ್ ಜಗದೀಶ್ ಅವರು   ವಿದ್ಯಾರ್ಥಿನಿಯರು ನೀಡಿದ  ಲೈಂಗಿಕ ಕಿರುಕುಳದ   ಹೇಳಿಕೆಯ ಆಧಾರದ ಮೇಲೆ ಆರೋಪಿ ಎಸ್.ಕೆ.ಚಂದ್ರಶೇಖರ್ ಅವರನ್ನು ವಶಕ್ಕೆ ಪಡೆದು  ಮುಂದಿನ  ತನಿಖೆ ಕೈಗೊಂಡಿದ್ದಾರೆ.  ಮುಂದಿನ  ತನಿಖೆ ಕೈಗೊಂಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮತ್ತೆ ಅಧಿಕಾರಕ್ಕೆ ಬಂದರೆ ದಲಿತರ ಸಾಲ ಮನ್ನಾ: ಸಿದ್ದರಾಮಯ್ಯ