Publish Date: Sun, 21 Feb 2021 (09:03 IST)
Updated Date: Sun, 21 Feb 2021 (09:05 IST)
ಲಕ್ನೋ: ಪಾಗಲ್ ಪ್ರೇಮಿಯೊಬ್ಬ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದ ಮಹಿಳೆಯ ಮೇಲೆ ಗುಂಡು ಹಾರಿಸಿ ತಾನೂ ಶೂಟ್ ಮಾಡಿಕೊಂಡು ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಘಟನೆಯಲ್ಲಿ ಪಾಗಲ್ ಪ್ರೇಮಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಂಭೀರವಾಗಿ ಗಾಯಗೊಂಡ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಶಾಲೆಗೆ ತೆರಳುತ್ತಿದ್ದ ಶಿಕ್ಷಕಿಯನ್ನು ಹಿಂಬಾಲಿಸುತ್ತಿದ್ದ ಯುವಕ ಆಕೆಯೊಂದಿಗೆ ಪ್ರೇಮಿಸುವಂತೆ ಕಾಡುತ್ತಿದ್ದ. ಅಲ್ಲದೆ, ಈ ವಿಚಾರವಾಗಿ ಇಬ್ಬರ ಮಧ್ಯೆ ಜಗಳವಾಗಿ ಕೊನೆಗೆ ದುರಂತ ಅಂತ್ಯ ಕಂಡಿದೆ.