ಚೆನ್ನೈ: 12 ನೇ ತರಗತಿ ಓದುತ್ತಿದ್ದ ಇಬ್ಬರು ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಶಿಕ್ಷಕಿಯರನ್ನು ಬಂಧಿಸಲಾಗಿದೆ.
ವಿದ್ಯಾರ್ಥಿನಿಯರು ಶಿಕ್ಷಕಿಯರ ಕಿರುಕುಳ ತಾಳಲಾರದೇ ಹಾಸ್ಟೆಲ್ ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಆರೋಪಿಸಲಾಗಿದೆ. ಈ ಸಂಬಂಧ ಭಾರೀ ಪ್ರತಿಭಟನೆ ವ್ಯಕ್ತವಾಗಿದೆ.
ಈ ಸಂಬಂಧ ಈಗ ಗಣಿತ ಮತ್ತು ಕೆಮಿಸ್ಟ್ರಿ ಓದಿಸುತ್ತಿದ್ದ ಇಬ್ಬರು ಶಿಕ್ಷಕಿಯರು ಮತ್ತು ಶಾಲೆಯ ಪ್ರಾಂಶುಪಾಲರು, ಕಾರ್ಯದರ್ಶಿಗಳನ್ನೂ ಬಂಧಿಸಿ ವಿಚಾರಣೆಗೊಳಪಡಿಸಲಾಗುತ್ತಿದೆ.