ಹೈದರಾಬಾದ್: ತೆಲಂಗಾಣ ಪೊಲೀಸ್ ಅಕಾಡೆಮಿ ಡೆಪ್ಯುಟಿ ಡೈರೆಕ್ಟರ್ ಎಸ್ಪಿ ರತ್ನಕುಮಾರಿ ಮಗ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಹೇಳಲಾಗ್ತಿದೆ.
ಪಂಜಗುಟ್ಟದಲ್ಲಿರುವ ಐಎಎಸ್, ಐಪಿಎಸ್ ಕಾಲೋನಿಯಲ್ಲಿ ಈ ಘಟನೆ ನಡೆದಿದ್ದು, ರೋಷನ್ ಆತ್ಮಹತ್ಯೆ ಮಾಡಿಕೊಂಡ ಯುವಕ. ಆದರೆ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ರೋಷನ್ ತನ್ನ ರೂಮಿನಲ್ಲಿ ನಿದ್ರೆ ಮಾತ್ರೆ ಸೇವಿಸಿ ಮಂಚದಿಂದ ಕೆಳಗೆ ಬಿದ್ದು ಮೃತಪಟ್ಟಿದ್ದಾನೆ ಎನ್ನಲಾಗುತ್ತಿದೆ. ಅಲ್ಲದೆ 5 ತಿಂಗಳಿನಿಂದ ರೋಷನ್ ಖಿನ್ನತೆಯಿಂದ ಬಳಲುತ್ತಿದ್ದ ಎಂದು ಕುಟುಂಬದವರು ಹೇಳಿದ್ದಾರೆ.
ಈ ಕುರಿತು ಬಂಜಾರ ಹಿಲ್ಸ್ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 174 ಅಡಿ ಕೇಸ್ ದಾಖಲಾಗಿದೆ. ತನಿಖೆಯಿಂದಷ್ಟೇ ಮತ್ತಷ್ಟು ಮಾಹಿತಿ ಹೊರ ಬರಬೇಕಿದೆ.