ಪುಲ್ವಾಮ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಭಾರತೀಯ ಸೇನಾ ಪಡೆ ಓರ್ವ ಉಗ್ರನನ್ನು ಹೊಡೆದುರುಳಿಸಿದೆ.
ಪುಲ್ವಾಮ ಜಿಲ್ಲೆಯ ಬಮ್ನೂ ಪ್ರದೇಶದಲ್ಲಿ ಅಡಗಿ ಕುಳಿತಿತಿರುವ ಉಗ್ರರು ಇಂದು ಬೆಳಿಗ್ಗೆ ದಾಳಿ ನಡೆಸಿದ್ದಾರೆ. ಉಗ್ರರು ದಾಳಿ ನಡೆಸುತ್ತಿದ್ದಂತೆಯೇ ವಿಶೇಷ ಕಾರ್ಯಪಡೆ ಹಾಗೂ 44 ರಾಷ್ಟ್ರೀಯ ರೈಫಲ್ಸ್ ಪಡೆಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಉಗ್ರನೊಬ್ಬನನ್ನು ಹತ್ಯೆ ಮಾಡಿದೆ.
ಸ್ಥಳದಲ್ಲಿ ಮತ್ತಿಬ್ಬರು ಉಗ್ರರು ಅಡಗಿ ಕುಳಿತಿರುವ ಶಂಕೆಯಿದ್ದು ಕಾರ್ಯಾಚರಣೆ ಮುಂದುವರೆಸಲಾಗಿದೆ.