ಕಳೆದ ಆರು ತಿಂಗಳುಗಳಿಂದ ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರವೆಸಗುತ್ತಿದ್ದ 35 ವರ್ಷ ವಯಸ್ಸಿನ ಬಸ್ ಚಾಲಕನನ್ನು ಭಿವಂಡಿಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಶಾಲೆಗೆ ಮಕ್ಕಳನ್ನು ಕರೆದುಕೊಂಡು ಹೋಗುವ ವಾಹನದ ಚಾಲಕನಾಗಿದ್ದ ಆರೋಪಿ ತುಳಸಿರಾಮ್ ಮನೇರೆಯನ್ನು ನಿನ್ನೆ ರಾತ್ರಿ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ಎಸ್.ವಿ.ಜಾಧವ್ ತಿಳಿಸಿದ್ದಾರೆ.
ಆರೋಪಿ ತುಳಸಿರಾಮ್ 8-9 ವರ್ಷ ವಯಸ್ಸಿನ ಬಾಲಕಿಯರ ಮೇಲೆ ಕೆಲವು ಬಾರಿ ವಾಹನದಲ್ಲಿ ಕೆಲ ಬಾರಿ ನಿರ್ಜನ ಪ್ರದೇಶಗಳಿಗೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಮತ್ತಷ್ಟು ಬಾಲಕಿಯರ ಮೇಲೆ ಆರೋಪಿ ಅತ್ಯಾಚಾರವೆಸಗಿರುವ ಸಾಧ್ಯತೆಗಳಿರುವುದರಿಂದ ವಿಚಾರಣೆಗೊಳಪಡಿಸಲಾಗಿದೆ. ಬಾಲಕಿಯರು ಶಾಲೆಗೆ ಬಾರದಿರುವುದನ್ನು ಕಂಡು ಶಿಕ್ಷಕರು ಬಾಲಕಿಯ ಪೋಷಕರಿಗೆ ಕರೆ ಮಾಡಿದ ನಂತರ ಆಘಾತಕಾರಿ ಅಂಶ ಬಹಿರಂಗವಾಗಿದೆ.
ಆರೋಪಿ ತುಳಸಿರಾಮ್ ವಿರುದ್ಧ ಪೋಸ್ಕೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.