ನವದೆಹಲಿ : ಕಾಮುಕನೊಬ್ಬ 9 ವರ್ಷದ ಬಾಲಕಿಯನ್ನು ಎಳೆದೊಯ್ದು ಅತ್ಯಾಚಾರ ಎಸಗಿದ ಘಟನೆ ಸಮೈಪುರ್ ಬಾಡ್ಲಿ ಸಮೀಪದಲ್ಲಿ ನಡೆದಿದೆ.
ಮನೆಯ ಹೊರಭಾಗದಲ್ಲಿ ಬಾಲಕಿ ಆಟವಾಡುತ್ತಿದ್ದಾಗ, ಮನೆಯವರು ಮನೆಯ ಒಳಗಡೆ ಇರುವುದನ್ನು ಗಮನಿಸಿದ ಕಾಮುಕ ಆಕೆಯನ್ನು ಎಳೆದೊಯ್ದು ಅತ್ಯಾಚಾರಗೈಯ್ದು ಸ್ಥಳದಿಂದ ಪರಾರಿಯಾಗಿದ್ದಾನೆ. ನಂತರ ಬಾಲಕಿ ,ಮನೆಗೆ ಬಂದು ನಡೆದ ಘಟನೆಯ ಬಗ್ಗೆ ತನ್ನ ಪೋಷಕರಿಗೆ ತಿಳಿಸಿದ್ದಾಳೆ.
ಮನೆಯವರು ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ. ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ ಪೊಲೀಸರು ಆರೋಪಿಯ ಪತ್ತೆಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ