ಅಹಮದಾಬಾದ್ : ಮಾನನಷ್ಟ ಪ್ರಕರಣದಲ್ಲಿ ಸೂರತ್ ನ್ಯಾಯಾಲಯ ನೀಡಿದ್ದ ಆದೇಶದ ವಿರುದ್ಧ ಕಾನೂನು ಹೋರಾಟ ನಡೆಸುತ್ತಿರುವ ಎಐಸಿಸಿ ಮಾಜಿ ಅಧ್ಯಕ್ಷ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಇದೀಗ ಮತ್ತೊಂದು ದೊಡ್ಡ ಹಿನ್ನಡೆಯಾಗಿದೆ.
ರಾಗಾ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಗುಜರಾತ್ ಹೈಕೋರ್ಟ್ ವಜಾ ಮಾಡಿದೆ. ಸುದೀರ್ಘ ವಿಚಾರಣೆ ನಡೆಸಿದ್ದ ಗುಜರಾತ್ ಹೈಕೋರ್ಟ್ ಶುಕ್ರವಾರ ತನ್ನ ಆದೇಶ ಪ್ರಕಟಿಸಿದೆ. ಸೂರತ್ ನ್ಯಾಯಾಲಯ ನೀಡಿದ ಆದೇಶ ಸರಿಯಾಗಿದೆ ಮತ್ತು ಕಾನೂನುಬದ್ಧವಾಗಿದೆ ಎನ್ನುವ ಮೂಲಕ ಕೆಳ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ.
ಶಿಕ್ಷೆಯ ತಡೆ ನಿರಾಕರಿಸುವುದರಿಂದ ರಾಹುಲ್ ಗಾಂಧಿ ಅವರಿಗೆ ಅನ್ಯಾಯವಾಗುವುದಿಲ್ಲ, ಶಿಕ್ಷೆಯನ್ನು ತಡೆಹಿಡಿಯಲು ಯಾವುದೇ ಸಮಂಜಸವಾದ ಕಾರಣವಿಲ್ಲ. ವಿಧಿಸಲಾದ ಆದೇಶವು ಸರಿ ಮತ್ತು ಕಾನೂನುಬದ್ಧವಾಗಿದೆ. ಅನರ್ಹತೆಯು ಕೇವಲ ಸಂಸದರು ಮತ್ತು ಶಾಸಕರಿಗೆ ಸೀಮಿತವಾಗಿಲ್ಲ. ಇದಲ್ಲದೆ ಅರ್ಜಿದಾರರ ವಿರುದ್ಧ ಹತ್ತು ಪ್ರಕರಣಗಳು ಬಾಕಿ ಉಳಿದಿವೆ.