ನವದೆಹಲಿ : ಗಲ್ವಾನ್ ಗಡಿಯಲ್ಲಿ ಭಾರತ ಚೀನಾ ಸಂಘರ್ಷದ ಹಿನ್ನಲೆಯಲ್ಲಿ ಇಂದು ಪ್ರಧಾನಿ ಮೋದಿ ಸರ್ವಪಕ್ಷ ಸಭೆ ಕರೆದಿದ್ದಾರೆ.
ದೆಹಲಿಯಲ್ಲಿ ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ನೇತೃತ್ವದಲ್ಲಿ ಸರ್ವಪಕ್ಷ ಸಭೆ ನಡೆಯಲಿದ್ದು, ವಿಡಿಯೋ ಕಾನ್ಫರೆನ್ಸ್ ಮೂಲಕ ಮೋದಿ ಸಭೆ ನಡೆಸಲಿದ್ದಾರೆ. ಆ ವೇಳೆ ಗಡಿ ಸಂಘರ್ಷದ ಬೆಳವಣೆಗೆಗಳ ಬಗ್ಗೆ ಚರ್ಚೆ ನಡೆಸಿ ಎಲ್ಲ ಪಕ್ಷಗಳ ಸಲಹೆ ಪಡೆಯಲಿದ್ದಾರೆ ಎನ್ನಲಾಗಿದೆ.