ನವದೆಹಲಿ : ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಬಗ್ಗೆ ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಸ್ವಪಕ್ಷದ ವಿರುದ್ಧ ಪರೋಕ್ಷವಾಗಿ ವ್ಯಂಗ್ಯ ಮಾಡಿದ್ದಾರೆ.
ರಾಮನ ಭಾರತದಲ್ಲಿ ಪೆಟ್ರೋಲ್ ಬೆಲೆ 93ರೂ. ಸೀತೆಯ ನೇಪಾಳದಲ್ಲಿ ಪೆಟ್ರೋಲ್ ಬೆಲೆ 53ರೂ. ರಾವಣನ ಲಂಕೆಯಲ್ಲಿ ಪೆಟ್ರೋಲ್ ಬೆಲೆ 51ರೂ. ಕೇಂದ್ರ ಸರ್ಕಾರದ ವಿರುದ್ಧ ಪರೋಕ್ಷವಾಗಿ ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.