ನವದೆಹಲಿ : ಕೊನೆಗೂ ಬ್ಯಾಂಕಿಂಗ್ ಪರೀಕ್ಷೆಯನ್ನು ಕನ್ನಡದಲ್ಲಿ ಬರೆಯಲು ಕೇಂದ್ರ ಸರ್ಕಾರ ಅವಕಾಶ ನೀಡಿದೆ.
ಮಾತೃಭಾಷೆಯಲ್ಲಿ ಬ್ಯಾಂಕಿಂಗ್ ಪರೀಕ್ಷೆ ಬರೆಯಲು ಅವಕಾಶ ನೀಡುವುದಾಗಿ ಈ ಮೊದಲು ಭರವಸೆ ನೀಡಿದ್ದ ಕೇಂದ್ರ ಸರ್ಕಾರ ಬಳಿಕ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ನಿರಾಕರಿಸಿತ್ತು.ಇದಕ್ಕೆ ಕನ್ನಡಿಗರು ತೀವ್ರ ವಿರೋಧ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಕನ್ನಡದಲ್ಲಿ ಬ್ಯಾಂಕಿಂಗ್ ಪರೀಕ್ಷೆ ನಡೆಯಲು ಅವಕಾಶ ನೀಡಿದೆ.
ಈ ಕುರಿತು ಟ್ವೀಟ್ ಮಾಡಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಪ್ರಾದೇಶಿಕ ಭಾಷೆಯಲ್ಲಿ ಬ್ಯಾಂಕಿಂಗ್ ಪರೀಕ್ಷೆಗಳನ್ನು ಬರೆಯಲು ಅವಕಾಶ ನೀಡುವುದಾಗಿ ಹೇಳಿದ್ದು, ಇಂಗ್ಲಿಷ್ ಸೇರಿದಂತೆ ಪ್ರಾದೇಶಿಕ ಭಾಷೆಗಳಲ್ಲಿ ಬ್ಯಾಂಕಿಂಗ್ ಪರೀಕ್ಷೆಗಳು ನಡೆಯಲಿವೆ ಎಂದುತಿಳಿಸಿದ್ದಾರೆ.