ನವದೆಹಲಿ : ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಪ್ರತಿಪಕ್ಷಗಳ ನಾಯಕರ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳಲು ಮುಂದಾಗಿದ್ದು, ಅದಕ್ಕಾಗಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ವಿರುದ್ಧ ಪಿತೂರಿ ನಡೆಸುತ್ತಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.
ಗುರುವಾರ ಸುದ್ದಿಗೋಷ್ಠಿವೊಂದರಲ್ಲಿ ಮಾತನಾಡಿದ ಪಕ್ಷದ ವಕ್ತಾರ ರಣದೀಪ್ ಸುಜೇವಾಲಾ ಅವರು,’ ಅಗಸ್ಟಾ ವೆಸ್ಟ್‌ಲ್ಯಾಂಡ್ ಹೆಲಿಕಾಪ್ಟರ್ ಪ್ರಕರಣದಲ್ಲಿ ಕೇಂದ್ರ ಸರ್ಕಾರವು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರನ್ನು ಸಿಕ್ಕಿ ಹಾಕಿಸಲು ಮುಂದಾಗಿದೆ. ಸೋನಿಯಾ ವಿರುದ್ಧ ಮಾಹಿತಿ ಕೊಟ್ಟರೆ ಡೀಲ್‌ನ ಮಧ್ಯವರ್ತಿಯಾಗಿದ್ದ ಬ್ರಿಟನ್‌ನ ಕ್ರಿಶ್ಚಿಯನ್ ಮೈಕೆಲ್ ವಿರುದ್ಧ ಇರುವ ಪ್ರಕರಣದಿಂದ ದೋಷಮುಕ್ತಗೊಳಿಸುವ ಆಶ್ವಾಸನೆ ನೀಡುವುದರ ಮೂಲಕ ಮೈಕೆಲ್ ಮೇಲೆ ಒತ್ತಡ ಹೇರಲಾಗುತ್ತಿದೆ ಎಂದು ಆರೋಪಿಸಿದ್ದಾರೆ.
ಪ್ರಧಾನಿಯವರು ಪ್ರತಿಪಕ್ಷಗಳ ನಾಯಕರ ವಿರುದ್ಧ ಅಪಪ್ರಚಾರ ನಡೆಸಲು ತನಿಖಾ ಸಂಸ್ಥೆ ಗಳ ದುರ್ಬಳಕೆ ಮಾಡಿಕೊಳ್ಳುವುದರ ಮೂಲಕ ಪ್ರತಿಪಕ್ಷಗಳ ನಾಯಕರ ವಿರುದ್ಧ ಪ್ರತೀಕಾರಕ್ಕಾಗಿ ಸುಳ್ಳು ಸಾಕ್ಷ್ಯ ನೀಡಲು ಮುಂದಾಗುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ