Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಉದ್ಯಮಿಗಳ ಸಾಲ ಮನ್ನಾ ಮಾಡಿದ ಕೇಂದ್ರ ಸರ್ಕಾರಕ್ಕೆ ರೈತರ ಸಾಲಮನ್ನಾ ಮಾಡಲು ಹಣ ಇಲ್ಲ- ರಾಹುಲ್ ಗಾಂಧಿ ಕಿಡಿ

ಉದ್ಯಮಿಗಳ ಸಾಲ ಮನ್ನಾ ಮಾಡಿದ ಕೇಂದ್ರ ಸರ್ಕಾರಕ್ಕೆ  ರೈತರ ಸಾಲಮನ್ನಾ ಮಾಡಲು ಹಣ ಇಲ್ಲ- ರಾಹುಲ್ ಗಾಂಧಿ ಕಿಡಿ
ಬೆಂಗಳೂರು , ಸೋಮವಾರ, 1 ಏಪ್ರಿಲ್ 2019 (06:20 IST)
ಬೆಂಗಳೂರು : ಮುಂದಿನ ಐದು ವರ್ಷಗಳಲ್ಲಿ ಬಡತನವನ್ನು ಸಂಪೂರ್ಣವಾಗಿ ಹೋಗಲಾಡಿಸುವ ಕೆಲಸವನ್ನು ನಾವು ಮತ್ತು ನಮ್ಮ ಯೋಜನೆಗಳು ಮಾಡಲಿವೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಆಶ್ವಾಸನೆ ನೀಡಿದ್ದಾರೆ.


ನೆಲಮಂಗಲ ಬಳಿ ಇರುವ ಅಂತಾರಾಷ್ಟ್ರೀಯ ವಸ್ತುಪ್ರದರ್ಶನ ಮೈದಾನದಲ್ಲಿ ನಡೆದ ಕಾಂಗ್ರೆಸ್-ಜೆಡಿಎಸ್ ಸಮಾವೇಶದಲ್ಲಿ ಮಾತನಾಡಿದ ಅವರು,’ 2014ರ ಚುನಾವಣೆ ಮುನ್ನ ಮೋದಿ ಎಲ್ಲರ ಖಾತೆಗೆ 15 ಲಕ್ಷ ನೀಡುತ್ತೇನೆ ಎಂದು ಸುಳ್ಳು ಆಶ್ವಾಸನೆ ನೀಡಿದರು. ಆದ್ರೆ ಕಾಂಗ್ರೆಸ್ ‘ನ್ಯಾಯ’ ಯೋಜನೆಯ ಮೂಲಕ ದೇಶದ ಶೇ.20 ಭಾಗವಿರುವ ಬಡವರಿಗೆ ವರ್ಷಕ್ಕೆ 72 ಸಾವಿರ ರೂ. ಹಣ ಹಾಕಲಿದೆ. ಈ ಯೋಜನೆಯಲ್ಲಿ 5 ಕೋಟಿ ಫಲಾನುಭವಿಗಳಿಗೆ ಸಿಗಲಿದೆ’ ಎಂದು ಹೇಳಿದ್ದಾರೆ.


ಕಳೆದ ಐದು ವರ್ಷಗಳಲ್ಲಿ ದೇಶದ ಬಡವರು, ಸಣ್ಣ ವ್ಯಾಪಾರಿಗಳಿಗೆ ಮತ್ತು ರೈತರಿಗಾಗಿ ಯಾವ ಯೋಜನೆಯನ್ನು ನೀಡಲಿಲ್ಲ. ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರ ಕೇವಲ 15 ಉದ್ಯಮಿಗಳ ಅಭಿವೃದ್ಧಿಗಾಗಿ ಕೆಲಸ ಮಾಡಿದೆ. ರಫೇಲ್ ಡೀಲ್ ಅನಿಲ್ ಅಂಬಾನಿ ನೀಡಲು ಎಲ್ಲ ಕಾನೂನುಗಳನ್ನು ಉಲ್ಲಂಘಿಸಿ 30 ಸಾವಿರ ಕೋಟಿ ಹಣವನ್ನು ಅವರ ಜೇಬಿನಲ್ಲಿ ಹಾಕಿದರು. 15 ಉದ್ಯಮಿಗಳ ಮೂರುವರೆ ಲಕ್ಷ ಕೋಟಿ ಸಾಲವನ್ನು ಮನ್ನಾ ಮಾಡಿದರು. ರೈತರ ಸಾಲಮನ್ನಾ ಮಾಡಲು ಹಣ ಇಲ್ಲವೆಂದು ಮೋದಿ ಮತ್ತು ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳುವ ಮೂಲಕ ಇಬ್ಬಗೆಯ ನೀತಿಯನ್ನು ಅನುಸರಿಸಲಾಗುತ್ತದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಆರೋಪ ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

Share this Story:

Follow Webdunia kannada

ಮುಂದಿನ ಸುದ್ದಿ

150 ಅಡಿ ಎತ್ತರದ ಜಾಯಿಂಟ್ ವೀಲ್ ನಲ್ಲಿ ದೈಹಿಕ ಸಂಬಂಧ ಬೆಳೆಸಿದ ದಂಪತಿಗಳು