ನವದೆಹಲಿ : ಸಹೋದ್ಯೋಗಿ ಯುವತಿಗೆ ಲೈಂಗಿಕ ಉದ್ರೇಕದ ಮಾತ್ರೆ ನೀಡಿ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆಯೊಂದು ವರದಿಯಾಗಿದೆ.
ಬಿರ್ಜು(25), ವಿನೋದ್ ಕುಮಾರ್ (31) ಈ ಕೃತ್ಯ ಎಸಗಿದ ಕಾಮುಕರು. ಇವರಿಬ್ಬರು ಹಾಗೂ ಯುವತಿ ಬಹು ಅಂತರಾಷ್ಟ್ರೀಯ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಶನಿವಾರ ರಾತ್ರಿ ಮನೆಗೆ ಡ್ರಾಪ್ ನೀಡುವುದಾಗಿ ಹೇಳಿ ಪಾನೀಯದಲ್ಲಿ ಲೈಂಗಿಕ ಉದ್ರೇಕದ ಮಾತ್ರೆಗಳನ್ನು ಸೇರಿಸಿ ಯುವತಿಗೆ ಕುಡಿಸಿ ಆಕೆಯನ್ನು ಫ್ಲಾಟ್ಗೆ ಕರೆದೊಯ್ದು, ಅತ್ಯಾಚಾರ ನಡೆಸಿದ್ದಾರೆ.
ಈ ವಿಚಾರವನ್ನು ತನ್ನ ಮನೆಯವರಿಗೆ ತಿಳಿಸಿದ ಸಂತ್ರಸ್ತ್ರ ಯುವತಿ ,ಭಾನುವಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾಳೆ. ಯುವತಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದು, ಆಕೆ ಮೇಲೆ ಅತ್ಯಾಚಾರವಾಗಿರುವುದು ದೃಢಪಟ್ಟಿದೆ. ಘಟನೆ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.