ನವದೆಹಲಿ : ಮಧ್ಯಪ್ರದೇಶ ಹಾಗೂ ರಾಜಸ್ತಾನದಲ್ಲಿ ಕಾಂಗ್ರೆಸ್ ಗೆ ನೀಡಿರುವ ಬೆಂಬಲವನ್ನು ಹಿಂಪಡೆಯುವುದಾಗಿ ಮಾಯಾವತಿಯ ಬಹುಜನ ಸಮಾಜವಾದಿ ಪಕ್ಷ(ಬಿಎಸ್ಪಿ) ಬೆದರಿಕೆಯೊಡ್ಡಿದೆ.
ಎಸ್ಸಿ ಎಸ್ಟಿ(ದೌರ್ಜನ್ಯ ತಡೆ) ಕಾಯ್ದೆ-1989 ದುರ್ಬಲಗೊಳಿಸಿರುವ ಸಂಬಂಧ ಹಲವು ದಲಿತ ಸಂಘಟನೆಗಳು ಏಪ್ರಿಲ್ 2ರಂದು ಭಾರತ್ ಬಂದ್ ಗೆ ಕರೆ ನೀಡಿದ್ದವು, ಈ ವೇಳೆ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿ 10 ಮಂದಿ ಮೃತಪಟ್ಟಿದ್ದರು. ಈ ಹಿನ್ನಲೆಯಲ್ಲಿ ದಲಿತ ಸಂಘಟನೆಗಳ ವಿರುದ್ಧ ಪ್ರಕರಣ ದಾಖಲಾಗಿದ್ದವು.
ಈ ಪ್ರಕರಣಗಳನ್ನು ವಜಾ ಮಾಡಬೇಕು. ಇಲ್ಲದಿದ್ದರೆ ರಾಜಸ್ತಾನ ಹಾಗೂ ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನೀಡಿರುವ ಬೆಂಬಲವನ್ನು ವಾಪಸ್ ಪಡೆಯುವುದಾಗಿ ಮಾಯಾವತಿಯ ಪಕ್ಷ ಇದೀಗ ಬೆದರಿಕೆಯೊಡ್ಡಿದೆ ಎಂಬುದಾಗಿ ತಿಳಿದುಬಂದಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.