ನವದೆಹಲಿ : ದೆಹಲಿ ಮಾದರಿ ಎಂದರೆ ಪ್ರಾಮಾಣಿಕ ಸರ್ಕಾರವಾಗಿದೆ.
ಇದು ಮುಂದಿನ ದಿನಗಳಲ್ಲಿ ಹಿಮಾಚಲ ಪ್ರದೇಶಕ್ಕೂ ಸಿಗಲಿದೆ ಎಂದು ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಜೈರಾಮ್ ಠಾಕೂರ್ಗೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ತಿರುಗೇಟು ನೀಡಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೆಹಲಿ ಮಾದರಿ ಎಂದರೆ ಪ್ರಾಮಾಣಿಕ ಸರ್ಕಾರ. ಸಾಮಾಜಿಕ ಮತ್ತು ರಾಜಕೀಯ ಪರಿಸ್ಥಿತಿಗಳು ವಿಭಿನ್ನವಾಗಿರುವುದರಿಂದ ಹಿಮಾಚಲ ಪ್ರದೇಶದಲ್ಲಿ ಪ್ರಾಮಾಣಿಕ ಸರ್ಕಾರ ಇರಲು ಸಾಧ್ಯವಿಲ್ಲ.
ಆದರೆ ಪಂಜಾಬ್ ಹಾಗೂ ದೆಹಲಿಯಂತೆ ಹಿಮಾಚಲ ಪ್ರದೇಶದಲ್ಲೂ ಆಪ್ ಪಕ್ಷ ಪ್ರಾಮಾಣಿಕ ಸರ್ಕಾರವನ್ನು ನೀಡುತ್ತದೆ ಎಂದರು.
ಈ ಹಿಂದೆ ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಜೈರಾಮ್ ಠಾಕೂರ್ ಮಾತನಾಡಿ, ಅರವಿಂದ್ ಕೇಜ್ರಿವಾಲ್ ಅವರು ಇಲ್ಲಿ ಆಪ್ ಪಕ್ಷವನ್ನು ತರಲು ಪ್ರಯತ್ನಿಸುತ್ತಿದ್ದಾರೆ.
ಅವರ ಭೇಟಿಯೂ ಚುನಾವಣೆ ಬರುವವರೆಗೂ ಮುಂದುವರೆಯುತ್ತದೆ. ಆದರೆ ಹಿಮಾಚಲ ಪ್ರದೇಶವನ್ನು ದೆಹಲಿ ಮಾದರಿಗೆ ಹೋಲಿಸುವುದು ಸರಿಯಲ್ಲ. ಇಲ್ಲಿನ ಸಾಮಾಜಿಕ ಮತ್ತು ರಾಜಕೀಯ ಸನ್ನಿವೇಶಗಳು ವಿಭಿನ್ನವಾಗಿವೆ ಎಂದು ಹೇಳಿದ್ದರು.