ಪಂಜಾಬ್ : ನಿವೃತ್ತ ಎಂಜಿನಿಯರ್ ಯೊಬ್ಬ ತನ್ನ ಮಗಳನ್ನೇ ಕಬ್ಬಿಣದ ರಾಡ್ ನಿಂದ ಹೊಡೆದು ಕೊಲೆ ಮಾಡಿ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಾನುವಾರ ಪಂಜಾಬ್ ನ ಅಮೃತಸರದಲ್ಲಿ ನಡೆದಿದೆ.
ನಿಲೋಫರ್(35) ಕೊಲೆಯಾದ ಮಗಳು. ಡೇವಿಡ್ ಮಾಸಿಹ್(60) ಮಗಳನ್ನೇ ಕೊಂದು ಆತ್ಮಹತ್ಯೆ ಮಾಡಿಕೊಂಡ ನಿವೃತ್ತ ಎಂಜಿನಿಯರ್. ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಈತ ಪೋಷಕರನ್ನು ಭೇಟಿಯಾಗಲು ಬಂದಿದ್ದ ಅನಿವಾಸಿ ಭಾರತೀಯ (ಎನ್ಆರ್ಐ) ಮಗಳನ್ನು ಮನೆಯಲ್ಲಿ ಯಾರು ಇಲ್ಲದ ವೇಳೆ ಕಬ್ಬಿಣದ ರಾಡ್ ನಿಂದ ತಲೆಯ ಮೇಲೆ ಹೊಡೆದು ಕೊಲೆ ಮಾಡಿದ್ದಾನೆ. ಬಳಿಕ ತಾನು ಸೀಲಿಂಗ್ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮನೆಗೆ ಬಂದ ಎಂಜಿನಿಯರ್ ಪತ್ನಿ ಹಾಗೂ ಅಳಿಯ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕೊಲೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.