Webdunia - Bharat's app for daily news and videos

Install App

3 ತಿಂಗಳ ಮಗು ಅಳುತ್ತಿದೆ ಎಂದು ನೆಲಕ್ಕೆ ಎಸೆದು ಕೊಂದ ತಂದೆ!

Webdunia
ಭಾನುವಾರ, 27 ನವೆಂಬರ್ 2022 (13:36 IST)
ಅಮರಾವತಿ : ಪಾಪಿ ತಂದೆಯೊಬ್ಬ ಮಗು ಅಳುತ್ತಿದ್ದನ್ನು ನೋಡಿ ಕೋಪಗೊಂಡು ಅದನ್ನು ಹತ್ಯೆ ಮಾಡಿದ ಘಟನೆ ಆಂಧ್ರಪ್ರದೇಶದ ತಿರುಪತಿಯ ಶ್ರೀಕಾಳಹಸ್ತಿ ಶುಕಬ್ರಹ್ಮ ಆಶ್ರಮದ ಬಳಿಯ ವಾಟರ್ ಹೌಸ್ ಕಾಲೋನಿಯಲ್ಲಿ ನಡೆದಿದೆ.
 
ಅನಿಲ್ ತನ್ನ 3 ತಿಂಗಳ ಮಗುವನ್ನು ಕೊಲೆ ಮಾಡಿದ ಆರೋಪಿ. ಈತನಿಗೆ ಹಾಗೂ ಈತನ ಪತ್ನಿ ಸ್ವಾತಿ ಜಗಳ ನಡೆದಿತ್ತು. ಅದೇ ವೇಳೆ ಮಗುವಿಗೂ ಜ್ವರ ಬಂದಿದ್ದರಿಂದ ಒಂದೇ ಸಮನೆ ಅಳುತ್ತಿತ್ತು. ಇದರಿಂದಾಗಿ ಕೋಪಗೊಂಡ ಅನಿಲ್ ಮಗುವನ್ನು ನೆಲಕ್ಕೆ ಎಸೆದಿದ್ದಾನೆ.

ನಾಲ್ಕು ದಿನದಿಂದ ಜ್ವರದಿಂದ ತೀವ್ರವಾಗಿ ಬಳಲುತ್ತಿದ್ದ ಮಗುವು ಅಸ್ವಸ್ಥಗೊಂಡಿತ್ತು. ಅಷ್ಟೇ ಅಲ್ಲದೇ ನೆಲಕ್ಕೆ ಆ ಮಗುವನ್ನು ಎಸೆದಿದ್ದರಿಂದ ಗಂಭೀರವಾಗಿ ತಲೆಗೆ ಪೆಟ್ಟು ಬಿದ್ದಿತ್ತು.

ಇದರಿಂದಾಗಿ ಕೂಡಲೇ ಆ ಮಗುವನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ  ಚಿಕಿತ್ಸೆ ಫಲಕಾರಿಯಾಗದೇ ಮಗು ಸಾವನ್ನಪ್ಪಿದೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments