ಮುಂಬೈ : ಮಹಾರಾಷ್ಟ್ರ ಕ್ಯಾಬಿನೆಟ್ ರಾಜ್ಯದ ಸೂಪರ್ ಮಾರ್ಕೆಟ್ ಮತ್ತು ವಾಕ್-ಇನ್ ಅಂಗಡಿಗಳಲ್ಲಿ ವೈನ್ ಮಾರಾಟಕ್ಕೆ ಅವಕಾಶ ನೀಡುವ ಪ್ರಸ್ತಾಪವನ್ನು ಅಂಗೀಕರಿಸಿದೆ.
ಸುಮಾರು 1,000 ಚದರ ಅಡಿ ಅಥವಾ ಅದಕ್ಕಿಂತ ಹೆಚ್ಚಿನ ವಿಸ್ತೀರ್ಣವನ್ನು ಹೊಂದಿರುವ ಮಹಾರಾಷ್ಟ್ರದ ಅಂಗಡಿಗಳು ಮತ್ತು ಸಂಸ್ಥೆಗಳ ಕಾಯ್ದೆಯಡಿ ನೋಂದಾಯಿಸಲ್ಪಟ್ಟಿರುವ ಸೂಪರ್ ರ್ಮಾರ್ಕೆಟ್ಗಳು ಮತ್ತು ಮಳಿಗೆಗಳಲ್ಲಿ “ಶೆಲ್ಫ್-ಇನ್-ಶಾಪ್” ವಿಧಾನವನ್ನು ಅಳವಡಿಸಿಕೊಳ್ಳಬಹುದಾಗಿದೆ.
ಸೂಪರ್ ಮಾರ್ಕೆಟ್ ಸಮೀಪದಲ್ಲಿ ದೇವಾಲಯಗಳು ಮತ್ತು ಶಿಕ್ಷಣ ಸಂಸ್ಥೆಗಳಿದ್ದರೆ ವೈನ್ ಮಾರಾಟ ಮಾಡಲು ಅನುಮತಿ ನೀಡಲಾಗುವುದಿಲ್ಲ ಮತ್ತು ಮದ್ಯ ನಿಷೇಧ ಜಾರಿಯಲ್ಲಿರುವ ಜಿಲ್ಲೆಗಳಲ್ಲಿ ಕೂಡ ವೈನ್ ಮಾರಾಟಕ್ಕೆ ಅನುಮತಿ ನೀಡಲಾಗುವುದಿಲ್ಲ. ಇನ್ನೂ ಸೂಪರ್ ಮಾರ್ಕೆಟ್ನಲ್ಲಿ ವೈನ್ ಮಾರಾಟ ಮಾಡಲು ಪರವಾನಗಾಗಿ 5,000 ರೂ. ಶುಲ್ಕವನ್ನು ಪಾವತಿಸಬೇಕಾಗುತ್ತದೆ.