ಮಧ್ಯಪ್ರದೇಶ : ಆಘಾತಕಾರಿ ಘಟನೆಯೊಂದರಲ್ಲಿ, ಮಧ್ಯಪ್ರದೇಶದ ಗುನಾ ಜಿಲ್ಲೆಯಲ್ಲಿ ಬುಡಕಟ್ಟು ಮಹಿಳೆಯೊಬ್ಬರಿಗೆ ಬೆಂಕಿ ಹಚ್ಚಲಾಗಿದೆ.
ತನ್ನನ್ನು ರಕ್ಷಿಸುವಂತೆ ಮಹಿಳೆ ಸಹಾಯಕ್ಕಾಗಿ ಕಿರುಚುತ್ತಿದ್ದರು, ಗ್ರಾಮಸ್ಥರ ಗುಂಪೊಂದು ಕ್ಯಾಮರಾದಲ್ಲಿ ಘಟನೆಯನ್ನು ಚಿತ್ರೀಕರಿಸಿದೆ. ಮಹಿಳೆ ಹೊತ್ತಿ ಉರಿಯುತ್ತಿರುವ ದೃಶ್ಯದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಬುಟಕಟ್ಟು ಮಹಿಳೆಯನ್ನು 38 ವರ್ಷದ ರಾಂಪ್ಯಾರಿ ಬಾಯಿ ಎಂದು ಗುರುತಿಸಲಾಗಿದ್ದು, ಮಹಿಳೆ ದುರ್ಬಲ ಬುಡಕಟ್ಟು ಗುಂಪಿಗೆ ಸೇರಿದ್ದಾಳೆ. ಆಕೆ ತೀವ್ರ ಸುಟ್ಟ ಗಾಯಗಳೊಂದಿಗೆ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದಾಳೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
ಬುಡಕಟ್ಟು ಮಹಿಳೆಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ಆಕೆಗೆ ಶೇಕಡಾ 80 ರಷ್ಟು ಸುಟ್ಟ ಗಾಯಗಳಾಗಿವೆ ಮತ್ತು ಆಕೆಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿಸಿದ್ದಾರೆ.
ಇನ್ನು ಭೋಪಾಲ್, ಗುನಾದಿಂದ 200 ಕಿಮೀ ದೂರದಲ್ಲಿರುವ ಬಮೋರಿ ಪೊಲೀಸ್ ಠಾಣೆ ವ್ಯಾಪ್ತಿಯ ಧನೋರಿಯಾ ಗ್ರಾಮದಲ್ಲಿ ಶನಿವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ಮಹಿಳೆಯ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಪಂಕಜ್ ಶ್ರೀವಾಸ್ತವ ತಿಳಿಸಿದ್ದಾರೆ.