Publish Date: Fri, 21 Aug 2020 (10:20 IST)
Updated Date: Fri, 21 Aug 2020 (10:22 IST)
ಪೇಸ್ ಬುಕ್ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಗಳನ್ನು ಹಾಕಿದ್ದೇ ಈ ಸಂಸದರಿಗೆ ಸಂಕಷ್ಟ ತಂದೊಡ್ಡಿದೆ.
ಸಂಸತ್ತಿನ ಮಾಹಿತಿ ಮತ್ತು ತಂತ್ರಜ್ಞಾನ ಸ್ಥಾಯಿ ಸಮಿತಿ ಅಧ್ಯಕ್ಷ ಶಶಿ ತರೂರ್ ಸಮಿತಿಯ ಸಭೆಯಲ್ಲಿ ಚರ್ಚೆ ಮಾಡಬೇಕಿದ್ದ ವಿಷಯಗಳನ್ನು ಪದೇ ಪದೇ ಸೋಷಿಯಲ್ ಮೀಡಿಯಾಗಳಲ್ಲಿ ಪೋಸ್ಟ್ ಮಾಡುತ್ತಿದ್ದಾರಂತೆ.
ಇದು ಬಿಜೆಪಿಯ ಸಂಸದರನ್ನು ಕೆರಳಿಸಿದ್ದು, ಶಶಿ ತರೂರ್ ರನ್ನು ಅಧ್ಯಕ್ಷ ಸ್ಥಾನದಿಂದ ಕೆಳಕ್ಕೆ ಇಳಿಸಬೇಕೆಂದು ಲೋಕಸಭಾಧ್ಯಕ್ಷರಿಗೆ ದೂರು ಸಲ್ಲಿಕೆ ಮಾಡಲಾಗಿದೆ.
ಸೋಷಿಯಲ್ ಮೀಡಿಯಾಗಳಲ್ಲಿ ಪೋಸ್ಟ್ ಹರಿಬಿಡುತ್ತಿರುವ ಶಶಿ ತರೂರ್ ಸ್ಥಾನಕ್ಕೆ ಕಂಟಕ ಎದುರಾಗಲಿದೆಯಾ ಅನ್ನೋ ಕುತೂಹಲ ಮೂಡಿದೆ.