ಲಕ್ನೋ : ಅತ್ಯಾಚಾರದ ಆರೋಪ ಮಾಡಿ ಹಣದ ಬೇಡಿಕೆ ಇಟ್ಟ ಮಹಿಳೆಯೊಬ್ಬಳನ್ನು ಪೊಲೀಸರು ಬಂಧಿಸಿದ ಘಟನೆ ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿ ನಡೆದಿದೆ.
ಲಖ್ನಾವಳಿ ಗ್ರಾಮದ ಮಹಿಳೆ ಯುವಕನೊಬ್ಬನಿಗೆ ಅತ್ಯಾಚಾರ ಆರೋಪದಡಿ ನಿನ್ನ ವಿರುದ್ಧ ಪೊಲೀಸರಿಗೆ ದೂರು ನೀಡುತ್ತೇನೆ ಎಂದು ಬೆದರಿಕೆ ಹಾಕಿ ಆತನಿಂದ ಹಣ ವಸೂಲಿ ಮಾಡುತ್ತಿದ್ದಳು. ನಂತರ ಆಕೆ ಮತ್ತೆ 10 ಲಕ್ಷ ರೂ.ಗೆ ಬೇಡಿಕೆ ಇಟ್ಟಾಗ ಆ ವ್ಯಕ್ತಿ ಭಾನುವಾರ ಸುರಜ್ಪುರ್ ಠಾಣೆಯಲ್ಲಿ ದೂರು ದಾಖಲಿಸಿದ್ದನು.
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮಹಿಳೆಯನ್ನು ಬಂಧಿಸಿ ವಿಚಾರಣೆ ನಡೆಸಿ, ಬಳಿಕ ಕೋರ್ಟ್ ಗೆ ಒಪ್ಪಿಸಿದ್ದಾರೆ. ಮಹಿಳೆ ವಿರುದ್ಧ ಐಪಿಸಿ ಸೆಕ್ಷನ್ 388 (ಬೆದರಿಕೆ ಆರೋಪ) ಮತ್ತು 506 (ಜೀವಬೆದರಿಕೆ) ಅಡಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.