Webdunia - Bharat's app for daily news and videos

Install App

ಅತ್ಯಾಚಾರ ಆರೋಪದ ಬೆದರಿಕೆ ಒಡ್ಡಿ ಮಹಿಳೆಯಿಂದ ಹಣ ಸುಲಿಗೆ

Webdunia
ಬುಧವಾರ, 7 ನವೆಂಬರ್ 2018 (15:03 IST)
ಲಕ್ನೋ : ಅತ್ಯಾಚಾರದ ಆರೋಪ ಮಾಡಿ ಹಣದ  ಬೇಡಿಕೆ ಇಟ್ಟ ಮಹಿಳೆಯೊಬ್ಬಳನ್ನು ಪೊಲೀಸರು ಬಂಧಿಸಿದ ಘಟನೆ ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿ ನಡೆದಿದೆ.


ಲಖ್ನಾವಳಿ ಗ್ರಾಮದ ಮಹಿಳೆ ಯುವಕನೊಬ್ಬನಿಗೆ ಅತ್ಯಾಚಾರ ಆರೋಪದಡಿ  ನಿನ್ನ ವಿರುದ್ಧ ಪೊಲೀಸರಿಗೆ ದೂರು ನೀಡುತ್ತೇನೆ ಎಂದು ಬೆದರಿಕೆ ಹಾಕಿ ಆತನಿಂದ ಹಣ ವಸೂಲಿ ಮಾಡುತ್ತಿದ್ದಳು. ನಂತರ ಆಕೆ ಮತ್ತೆ 10 ಲಕ್ಷ ರೂ.ಗೆ ಬೇಡಿಕೆ ಇಟ್ಟಾಗ ಆ ವ್ಯಕ್ತಿ ಭಾನುವಾರ ಸುರಜ್‍ಪುರ್ ಠಾಣೆಯಲ್ಲಿ ದೂರು ದಾಖಲಿಸಿದ್ದನು.


ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮಹಿಳೆಯನ್ನು ಬಂಧಿಸಿ ವಿಚಾರಣೆ ನಡೆಸಿ, ಬಳಿಕ ಕೋರ್ಟ್ ಗೆ ಒಪ್ಪಿಸಿದ್ದಾರೆ. ಮಹಿಳೆ ವಿರುದ್ಧ ಐಪಿಸಿ ಸೆಕ್ಷನ್ 388 (ಬೆದರಿಕೆ ಆರೋಪ) ಮತ್ತು 506 (ಜೀವಬೆದರಿಕೆ) ಅಡಿ ಪ್ರಕರಣ ದಾಖಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments