ಮಹಾರಾಷ್ಟ್ರದಲ್ಲಿ ಸಮ್ಮಿಶ್ರ ಸರಕಾರ ರಚಿಸಿರುವ ಶಿವಸೇನೆ ಮತ್ತು ಬಿಜೆಪಿ ಮೈತ್ರಿ ಮುರಿಯುವ ಸಾಧ್ಯತೆಗಳಿವೆ ಎಂದು ಶಿವಸೇನೆ ಮುಖಂಡ ಸಂಜಯ್ ರಾವತ್ ಹೇಳಿದ್ದಾರೆ.
ಶಿವಸೇನೆ ಮುಖ್ಯಸ್ಥ ಉದ್ಭವ್ ಠಾಕ್ರೆ ಯೋಗ್ಯ ಸಮಯದಲ್ಲಿ ಯೋಗ್ಯ ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ಯೋಗ್ಯ ಸಮಯ ಇದೀಗ ಸಮೀಪಿಸಿದೆ ಎಂದು ಮೈತ್ರಿ ಮುರಿಯುವ ಸುಳಿವು ನೀಡಿದ್ದಾರೆ.
ಸಾಮಾಜಿಕ ಅಂತರ್ಜಾಲ ತಾಣವಾದ ಟ್ವಿಟ್ಟರ್‌ನಲ್ಲಿ ಟ್ವೀಟ್ ಮಾಡಿರುವ ರಾವತ್, ಬಿಜೆಪಿ ಸರಕಾರದ ಜನವಿರೋಧಿ, ರೈತ ವಿರೋಧಿ ನೀತಿಗಳಿಂದ ಶಿವಸೇನೆ ವಿಮುಖಗೊಂಡಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಕಳೆದ ಕೆಲ ತಿಂಗಳುಗಳಿಂದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮತ್ತು ಶಿವಸೇನೆ ಮುಖ್ಯಸ್ಥ ಉದ್ಭವ್ ಠಾಕ್ರೆ ಮಧ್ಯೆ ತಿಕ್ಕಾಟ ನಡೆದಿದೆ ಎಂದು ಹೇಳಲಾಗುತ್ತಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.