Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಸಿಬಿಐ ನಿರ್ದೇಶಕ ಅಲೋಕ್‌ ವರ್ಮಾರನ್ನು ಮರು ನೇಮಕ ಮಾಡುವಂತೆ ಸುಪ್ರೀಂ ಕೋರ್ಟ್‌ನಿಂದ ಮಹತ್ವದ ತೀರ್ಪು ಪ್ರಕಟ

ಸಿಬಿಐ ನಿರ್ದೇಶಕ ಅಲೋಕ್‌ ವರ್ಮಾರನ್ನು ಮರು ನೇಮಕ ಮಾಡುವಂತೆ  ಸುಪ್ರೀಂ ಕೋರ್ಟ್‌ನಿಂದ  ಮಹತ್ವದ ತೀರ್ಪು ಪ್ರಕಟ
ನವದೆಹಲಿ , ಮಂಗಳವಾರ, 8 ಜನವರಿ 2019 (11:28 IST)
ನವದೆಹಲಿ : ಸಿಬಿಐ ನಿರ್ದೇಶಕ ಅಲೋಕ್‌ ವರ್ಮಾ ಅವರನ್ನು ಕಡ್ಡಾಯ ರಜೆ ಮೇಲೆ ಕಳುಹಿಸಿದ ಕೇಂದ್ರ ಸರಕಾರದ ಆದೇಶವನ್ನು ರದ್ದುಪಡಿಸಿ ಅಲೋಕ್‌ ವರ್ಮಾ ಅವರನ್ನು  ಮರು ನೇಮಕ ಮಾಡುವಂತೆ ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು ನೀಡಿದೆ.


ಸಿಬಿಐ ನಿರ್ದೇಶಕ ಅಲೋಕ್‌ ವರ್ಮಾ ಹಾಗೂ ಸಿಬಿಐ ವಿಶೇಷ ನಿರ್ದೇಶಕ ರಾಕೇಶ್‌ ಆಸ್ಥಾನಾ ಅವರು ಪರಸ್ಪರ ಭ್ರಷ್ಟಾಚಾರದ ಆರೋಪ ಮಾಡಿಕೊಂಡ ಹಿನ್ನೆಲೆಯಲ್ಲಿ ಕೇಂದ್ರ ಸರಕಾರವು ಇಬ್ಬರನ್ನೂ ಕಡ್ಡಾಯ ರಜೆ ಮೇಲೆ ಕಳುಹಿಸಿ, ಎಂ.ನಾಗೇಶ್ವರ ರಾವ್‌ ಅವರನ್ನು ಹಂಗಾಮಿ ನಿರ್ದೇಶಕರಾಗಿ ನೇಮಕ ಮಾಡಿತ್ತು.


ಈ ಹಿನ್ನಲೆಯಲ್ಲಿ ಈ ಆದೇಶಗಳನ್ನು ರದ್ದುಪಡಿಸಬೇಕು ಎಂದು ಕೋರಿ ವರ್ಮಾ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌  ಈ ಆದೇಶಗಳನ್ನು ರದ್ದುಗೊಳಿಸಿ ಸಿಬಿಐ ನಿರ್ದೇಶಕ ಅಲೋಕ್‌ ವರ್ಮಾ ಮರು ನೇಮಕ ಮಾಡುವಂತೆ ಆದೇಶ ನೀಡಿದೆ. ಹಾಗೇ ಸಿಬಿಐ ನಿರ್ದೇಶಕ ಅಲೋಕ್‌ ವರ್ಮಾ ಅವರು ಯಾವುದೇ ನೀತಿ ನಿಯಮಗಳಿಗೆ ಸಂಬಂಧಪಟ್ಟಂತೆ ತೀರ್ಮಾನಗಳನ್ನು ತೆಗೆದುಕೊಳ್ಳದಂತೆ ಹೇಳಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿ ಶಾಸಕ ಎಂ. ಚಂದ್ರಪ್ಪ ವಿರುದ್ಧ ದೂರು ದಾಖಲಾಗಿದ್ಯಾಕೆ?