ಲಕ್ನೋ : ತವರು ಮನೆಯಿಂದ ಪತ್ನಿಯನ್ನು ಕರೆದುಕೊಂಡು ಬರಲು ತೆರಳಿದ್ದ ಪತಿಯನ್ನು ಹೆಂಡತಿಯೇ ಪೆಟ್ರೋಲ್ ಸುರಿದು ಸಜೀವ ದಹನ ಮಾಡಿದ ಘಟನೆ ಆಗ್ರಾದಲ್ಲಿ ನಡೆದಿದೆ.
ಮೃತನನ್ನು ಧರ್ಮೇಂದ್ರ ಎಂದು ಗುರುತಿಸಲಾಗಿದೆ. ಆತ ತವರು ಮನೆಯಲ್ಲಿದ್ದ ಪತ್ನಿಯನ್ನು ಮನೆಗೆ ಕರೆದುಕೊಂಡು ಹೋಗಲು ತೆರಳಿದ್ದ ವೇಳೆ ಪತ್ನಿ ಹಾಗೂ ಆಕೆಯ ಕುಟುಂಬಸ್ಥರು ಈ ಕೃತ್ಯ ಎಸಗಿದ್ದಾರೆ.
ಪೆಟ್ರೋಲ್ ಸುರಿದು ಬೆಂಕಿ ಹಚ್ಚುತ್ತಿದ್ದಂತೆ ಆತ ಕೂಗಿಕೊಂಡು ಮನೆಯಿಂದ ಹೊರಗೆ ಓಡಿಹೋಗಿದ್ದಾನೆ. ಕೂಡಲೇ ಸ್ಥಳೀಯರು ರಕ್ಷಿಸಲು ಪ್ರಯತ್ನಿಸಿದ್ದಾರೆ. ಬಳಿಕ ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಆತ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.
ಈ ಸಂಬಂಧ ಮೃತನ ಸಹೋದರ ಪೊಲೀಸರಿಗೆ ದೂರು ನೀಡಿದ್ದಾನೆ. ವಿರುದ್ಧ ಸೆಕ್ಷನ್ 307 (ಕೊಲೆಗೆ ಯತ್ನ) ಅಡಿಯಲ್ಲಿ ದಾಖಲಿಸಲಾಗಿತ್ತು. ಈಗ ಸಂತ್ರಸ್ತ ಮೃತಪಟ್ಟಿದ್ದು ಅದನ್ನು ತಿದ್ದುಪಡಿ ಮಾಡಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.