ನವದೆಹಲಿ : ಹಲವು ಸಂಘಟನೆಗಳು ಇಂದು ಹಾಗೂ ನಾಳೆ ಎರಡು ದಿನಗಳ ಕಾಲ 'ಭಾರತ್ ಬಂದ್' ಗೆ ಕರೆ ಕೊಟ್ಟಿದ್ದು, ಈ ಮುಷ್ಕರದಲ್ಲಿ ಬ್ಯಾಂಕ್ ನೌಕರರು ಭಾಗಿಯಾಗುವುದರಿಂದ ಬ್ಯಾಂಕ್ ಕಾರ್ಯ ಸ್ಥಗಿತಗೊಳ್ಳಲಿದೆ ಎಂದು ಹೇಳಲಾಗಿತ್ತು.
ಆದರೆ ದೇಶದಾದ್ಯಂತ ಒಟ್ಟು 85 ಸಾವಿರ ಶಾಖೆಗಳನ್ನು ಹೊಂದಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯ, ಭಾರತ್ ಬಂದ್ ಕರೆ ನೀಡಿರುವ ಜನವರಿ 8 ಮತ್ತು 9ರಂದು ಎಂದಿನಂತೆ ಕಾರ್ಯ ನಿರ್ವಹಿಸಲಿವೆ ಎಂದು ಬ್ಯಾಂಕ್ ಸಂಘಟನೆಗಳ ಒಕ್ಕೂಟದ ಪಶ್ಚಿಮ ಬಂಗಾಳ ಘಟಕದ ಸಿದ್ಧಾರ್ಥ್ ಹೇಳಿದ್ದಾರೆ.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಜೊತೆಗೆ ಇಂಡಿಯನ್ ಓವರ್ ಸೀಸ್ ಬ್ಯಾಂಕ್ ಹಾಗೂ ಬ್ಯಾಂಕ್ ಆಫ್ ಇಂಡಿಯಾ ಕೂಡಾ ಕಾರ್ಯ ನಿರ್ವಹಿಸಲಿವೆ ಎಂದು ತಿಳಿದುಬಂದಿದ್ದು, ಉಳಿದ ಬ್ಯಾಂಕ್ ಗಳ ಸೇವೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆಯಿದೆ ಎನ್ನಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.