Publish Date: Sat, 05 Feb 2022 (15:01 IST)
Updated Date: Sat, 05 Feb 2022 (16:05 IST)
ಅಮರಾವತಿ : ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ತಿರುಪತಿಯ ತಿರುಮಲ ವೆಂಕಟೇಶ್ವರ ಸನ್ನಿಧಿಗೆ ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭೇಟಿ ನೀಡಿದ್ದಾರೆ.
ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಥಾವರ್ ಚಂದ್ ಗೆಹ್ಲೋಟ್ ಕರ್ನಾಟಕದ ರಾಜ್ಯಪಾಲರಾದ ನಂತರ ಇದೇ ಮೊದಲ ಬಾರಿಗೆ ತಿರುಪತಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ.
ದೇಶದಲ್ಲಿ ಸುಖ, ಸಮೃದ್ಧಿ, ಶಾಂತಿ ತುಂಬಿರಲಿ ಹಾಗೂ ಇಡೀ ವಿಶ್ವದಲ್ಲೇ ದೇಶದ ಹೆಸರು ಪಸರಿಸಲಿ ಎಂದು ದೇವರಲ್ಲಿ ಪ್ರಾರ್ಥಿಸಿದ್ದೇನೆ ಎಂದು ಗೆಹ್ಲೋಟ್ ತಿಳಿಸಿದ್ದಾರೆ.