Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಾಲಕಿಯ ಮೇಲೆ ನಡೆದಿದೆ ಇಂತಹ ಘೋರ ಕೃತ್ಯ

ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಾಲಕಿಯ ಮೇಲೆ ನಡೆದಿದೆ ಇಂತಹ ಘೋರ ಕೃತ್ಯ
ಲಕ್ನೋ , ಸೋಮವಾರ, 5 ನವೆಂಬರ್ 2018 (10:07 IST)
ಲಕ್ನೋ : ಖಾಸಗಿ ಆಸ್ಪತ್ರೆಯೊಂದರಲ್ಲಿ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಪ್ರಾಪ್ತೆಯ ಮೇಲೆ ಆಸ್ಪತ್ರೆಯ ಸಿಬ್ಬಂದಿ ಸೇರಿದಂತೆ ಐವರು  ಅಪರಿಚಿತರು ಸಾಮೂಹಿಕವಾಗಿ ಅತ್ಯಾಚಾರ ಎಸಗಿರುವ ಅಮಾನವೀಯ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.


16 ವರ್ಷದ ಬಾಲಕಿಗೆ ಹಾವು ಕಚ್ಚಿದ್ದರಿಂದ ಆಕೆಯನ್ನು ಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಾಲಕಿಯ ಪರಿಸ್ಥಿತಿ ಗಂಭೀರವಾಗಿದ್ದರಿಂದ ಐಸಿಯುವಿನಲ್ಲಿ ಚಿಕಿತ್ಸೆ ನಡೆಯುತ್ತಿತ್ತು. ಅಂತಹ ಪರಿಸ್ಥಿತಿಯಲ್ಲಿರುವ ಬಾಲಕಿಯ ಮೇಲೆ ಆಸ್ಪತ್ರೆ ಸಿಬ್ಬಂದಿ ಸೇರಿ ಐದು ಮಂದಿ ಸಾಮೂಹಿಕ ಅತ್ಯಾಚಾರವನ್ನು ಎಸಗಿದ್ದಾರೆ.


ಸಂತ್ರಸ್ತೆಯನ್ನು ಜನರಲ್ ವಾರ್ಡ್ ಗೆ ಶಿಫ್ಟ್ ಮಾಡಿದ ನಂತರ ಈ ವಿಚಾರವನ್ನು ಆಕೆ ಮನೆಯವರಿಗೂ ತಿಳಿಸಿದಾಗ ಘಟನೆ ಬೆಳಕಿಗೆ ಬಂದಿದೆ. ತಕ್ಷಣ ಪೊಲೀಸಿರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಬಂದ ಪೊಲೀಸರು ಆಸ್ಪತ್ರೆ ಸಿಬ್ಬಂದಿ ಸೇರಿ ಐವರ ವಿರುದ್ಧ ಎಫ್‍ಐಆರ್ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಪ್ರೀತಿಸುತ್ತಿದ್ದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಯುವಕ