ನವದೆಹಲಿ : “ಇದು ಕ್ರೀಡಾಪಟುಗಳ ಹೋರಾಟ. ಇದರಲ್ಲಿ ರಾಜಕೀಯ ಬೇಡ” ಎಂದು ಸಿಪಿಐ(ಎಂ) ನಾಯಕಿ ಬೃಂದಾ ಕಾರಟ್ ಅವರಿಗೆ ಪ್ರತಿಭಟನಾನಿರತ ಕುಸ್ತಿಪಟುಗಳು ಕೈಮುಗಿದು ವೇದಿಕೆಯಿಂದ ಕೆಳಗಿಳಿಸಿದ ಪ್ರಸಂಗ ಗುರುವಾರ ನವದೆಹಲಿಯಲ್ಲಿ ನಡೆಯಿತು.
ಡಬ್ಲ್ಯೂಎಫ್ಐ ಅಧ್ಯಕ್ಷ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಮಹಿಳಾ ಕುಸ್ತಿಪಟುಗಳು ಲೈಂಗಿಕ ದೌರ್ಜನ್ಯ ಆರೋಪ ಮಾಡಿ ನವದೆಹಲಿಯ ಜಂತರ್ ಮಂತರ್ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಪ್ರತಿಭಟನೆಯಲ್ಲಿ 200 ಕುಸ್ತಿಪಟುಗಳು ಪಾಲ್ಕೊಂಡಿದ್ದು, ಗುರುವಾರ ಎರಡನೇ ದಿನ ಪೂರೈಸಿದೆ. ಸಿಂಗ್ ರಾಜೀನಾಮೆಗೆ ಕುಸ್ತಿಪಟುಗಳು ಪಟ್ಟು ಹಿಡಿದಿದ್ದಾರೆ.
ಪ್ರತಿಭಟನಾಕಾರರಿಗೆ ಬೆಂಬಲ ಸೂಚಿಸಲು ಸಿಪಿಐ(ಎಂ) ನಾಯಕಿ ಬೃಂದಾ ಕಾರಟ್ ಸ್ಥಳಕ್ಕೆ ಬಂದಿದ್ದರು. ಆದರೆ ಇದಕ್ಕೆ ಕುಸ್ತಿಪಟುಗಳು ಒಪ್ಪಲಿಲ್ಲ. ಕುಸ್ತಿಪಟುಗಳ ಪ್ರತಿಭಟನೆಯಲ್ಲಿ ರಾಜಕೀಯ ಮಾಡುವುದು ಬೇಡ ಎಂದು ಹೇಳಿದ್ದಾರೆ.