ರಾಂಚಿ : ಅಯೋಧ್ಯೆ ತೀರ್ಪು ವಿಳಂಬವಾಗಲು ಕಾಂಗ್ರೆಸ್ ಸರ್ಕಾರವೇ ಕಾರಣ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೊಸ ಬಾಂಬ್ ಸಿಡಿಸಿದ್ದಾರೆ.
ಜಾರ್ಖಂಡ್ ನಲ್ಲಿ ನಡೆದ ರ್ಯಾಲಿಯಲ್ಲಿ ಮಾತನಾಡಿದ ಅವರು, ಅಯೋಧ್ಯೆ ಪ್ರಕರಣದಲ್ಲಿ ವಿಚಾರಣೆ ವಿಳಂಬಗೊಳಿಸಲು ಕಾಂಗ್ರೆಸ್ ಉದ್ದೇಶಪೂರ್ವಕವಾಗಿ ಪ್ರಯತ್ನಿಸಿದೆ. ಪ್ರಕರಣವನ್ನು ಮುಂದುವರಿಸಲು ಕಾಂಗ್ರೆಸ್ ಬಿಟ್ಟಿರಲಿಲ್ಲ. ಆದರೆ ಈಗ ಸುಪ್ರೀಂಕೋರ್ಟ್ ಅಲ್ಲಿ ರಾಮ ಮಂದಿರ ನಿರ್ಮಿಸಲು ಅವಕಾಶ ಮಾಡಿಕೊಟ್ಟಿದೆ ಎಂದು ಹೇಳಿದ್ದಾರೆ.
ಹಾಗೇ ಬುಡಕಟ್ಟು ಜನಾಂಗದವರ ಸ್ಥಾನಮಾನ ಹೆಚ್ಚಿಸುವಲ್ಲಿ ಕಾಂಗ್ರೆಸ್ ವಿಫಲವಾಗಿದೆ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಕಳೆದ 70 ವರ್ಷಗಳಲ್ಲಿ ಬುಡಕಟ್ಟು ಜನಾಂಗದವರಿಗೆ ಏನು ಮಾಡಿದ್ದೀರಿ? ಎಂದು ಪ್ರಶ್ನಿಸಿದ ಅವರು, ನಾವು ಪ್ರತಿ ಆದಿವಾಸಿ ಬ್ಲಾಕ್ ನಲ್ಲಿ ಏಕಲವ್ಯ ಶಾಲೆಗಳನ್ನು ತೆರೆದಿದ್ದೇವೆ. ಅಲ್ಲದೇ ಮೋದಿಯವರು ಜಿಲ್ಲಾ ಮಿನರಲ್ ಫಂಡ್ ಸ್ಥಾಪಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.