Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಕೇರಳದ ಕಣ್ಣೂರುನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಮೂರು ಸಜೀವ ಬಾಂಬ್‌ಗಳು ಪತ್ತೆಯಾಗಿದ್ದು ಪೊಲೀಸರು ಬಾಂಬ್‌ಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಕಣ್ಣೂರಿನ ಬಿಜೆಪಿ ಕಚೇರಿಯಲ್ಲಿ ಮೂರು ಬಾಂಬ್‌ಗಳು ಪತ್ತೆಯಾಗುತ್ತಿದ್ದಂತೆ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಪೊಲೀಸರು ಬಾಂಬ್ ನಿಷ್ಟ್ರೀಯ ದಳದೊಂದಿಗೆ ಆಗಮಿಸಿ ಬಾಂಬ್‌ಗಳನ್ನು ನಿಷ್ಟ್ರೀಯಗೊಳಿಸಿದ್ದಾರೆ ಎನ್ನಲಾಗಿದೆ.
ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು, ಬಿಜೆಪಿ ಕಚೇರಿಯಲ್ಲಿ ಬಾಂಬ್ ಇರಿಸಿದ ಆರೋಪಿಗಳ ಪತ್ತೆಗಾಗಿ ಜಾಲ ಬೀಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ರಾಜ್ಯದಲ್ಲಿ ಬಿಜೆಪಿ ಮತ್ತು ಸಿಪಿಎಂ ಕಾರ್ಯಕರ್ತರ ನಡುವಿನ ಘರ್ಷಣೆಗಳಲ್ಲಿ ಹೆಚ್ಚಳವಾಗಿದ್ದು, ರಾಜಕೀಯ ವೈಷಮ್ಯಕ್ಕೆ ಕಾರಣವಾಗಿದೆ ಎನ್ನಲಾಗುತ್ತಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.